Thursday, 12th December 2024

ಇಸ್ರೋ ಬೇಹುಗಾರಿಕೆ ಪ್ರಕರಣ: ನಾಲ್ವರಿಗೆ ನಿರೀಕ್ಷಣಾ ಜಾಮೀನು ರದ್ದು

ವದೆಹಲಿ: 1994ರ ಇಸ್ರೋ ಬೇಹುಗಾರಿಕೆ ವಿಚಾರದಲ್ಲಿ ವಿಜ್ಞಾನಿ ನಂಬಿ ನಾರಾಯಣನ್ ಅವರ ಕೈವಾಡವಿದೆ ಎಂಬ ಆರೋಪದ ಪ್ರಕರಣದಲ್ಲಿ ನಾಲ್ವರಿಗೆ ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ .

ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಪ್ರತ್ಯೇಕವಾಗಿ ಪರಿಗಣಿಸಲು ನ್ಯಾಯಾಲಯವು ಪ್ರಕರಣವನ್ನು ಕೇರಳ ಹೈಕೋರ್ಟ್‌ಗೆ ಹಿಂತಿರುಗಿಸಿದೆ. ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು ಸಿ ಟಿ ರವಿಕುಮಾರ್ ಅವರನ್ನೊಳಗೊಂಡ ಪೀಠವು ಪ್ರಕರಣವನ್ನು ಮತ್ತೆ ಹೈಕೋರ್ಟ್‌ಗೆ ಹಿಂತಿರುಗಿಸಿದ್ದು, ನಾಲ್ಕು ವಾರಗಳಲ್ಲಿ ಸಮಸ್ಯೆ ನಿರ್ಧರಿಸುವಂತೆ ಸೂಚಿಸಿದೆ.