ನವದೆಹಲಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗುರುವಾರ ಮರಳಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಲೋಕ ಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೇಂದ್ರ ಹಿರಿಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಅವರು ಬಿಜೆಪಿ ಸೇರುವ ಇಂಗಿತ ವನ್ನು ವ್ಯಕ್ತಪಡಿಸಿದ್ದಾರೆ. ಅದರಂತೆ, ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಹಿರಿಯ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಪಕ್ಷ ಸೇರ್ಪಡೆಗೊಂಡು ಮಾತನಾಡಿದ ಜಗದೀಶ್ ಶೆಟ್ಟರ್ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕೆನ್ನುವುದು ನನ್ನ ಅಸೆ. ಕಳೆದ ಹತ್ತು ವರ್ಷಗಳಿಂದ ದೇಶದ ಅಭಿವೃದ್ಧಿಗೆ ಕಾರಣೀಭೂತರಾಗಿದ್ದಾರೆ, ಅವರ ಅಭಿವೃದ್ಧಿ ಕೆಲಸದ ಮೂಲಕ ಭಾರತ ಮುನ್ನಡೆಯಬೇಕು ಎಂಬುದು ನನ್ನ ಅಸೆ ಹಾಗಾಗಿ ಬಿಜೆಪಿ ಸೇರ್ಪಡೆಗೊಂಡಿರುವುದಾಗಿ ಹೇಳಿಕೊಂಡಿದ್ದಾರೆ.
ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಮತ್ತು ಎಂಎಲ್ಸಿ ಸ್ಥಾನಕ್ಕೆ ಇ- ಮೇಲ್ ಮೂಲಕ ರಾಜೀನಾಮೆ ಸಲ್ಲಿಸಿರುವುದಾಗಿ ಶೆಟ್ಟರ್ ಹೇಳಿದ್ದಾರೆ.