Wednesday, 11th December 2024

ಜಗನ್ ರೆಡ್ಡಿ ವಿಮಾನದಲ್ಲಿ ತಾಂತ್ರಿಕ ದೋಷ

ಹೈದರಾಬಾದ್: ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು ವೈಎಸ್‌ಆರ್ಸಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಸಧ್ಯ ವಿಮಾನ ತುರ್ತು ಭೂಸ್ಪರ್ಷ ಮಾಡಿದೆ.

ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ, ಗನ್ನವರಂ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ್ದರು. ಆದಾಗ್ಯೂ, ಲ್ಯಾಂಡ್ ಆದ ಸ್ವಲ್ಪ ಸಮಯದ ಬಳಿಕ ವಿಮಾನದಲ್ಲಿ ತಾಂತ್ರಿಕ ದೋಷವನ್ನ ಗಮನಿಸಿದ್ದು, ಪೈಲಟ್’ಗೆ ಎಚ್ಚರಿಕೆ ನೀಡಲಾಯಿತು. ಅದರಂತ, ವಿಮಾನವನ್ನ ಗನ್ನವರಂ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ವಿಮಾನವು ಸಂಜೆ 5.03ಕ್ಕೆ ಗನ್ನವರಂ ವಿಮಾನ ನಿಲ್ದಾಣದಿಂದ ಹೊರಟಿತು. ಸಂಜೆ 5.26ಕ್ಕೆ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು.

ಸಿಎಂ ಜಗನ್ ಜೊತೆಗೆ ಸಂಸದ ಮಿಥುನ್ ರೆಡ್ಡಿ ಮತ್ತು ಸಿ.ಎಸ್.ಜವಾಹರ್ ರೆಡ್ಡಿ ಕೂಡ ಉಪಸ್ಥಿತರಿದ್ದರು ಎನ್ನಲಾಗಿದೆ.jagan