Friday, 13th December 2024

ಸತ್ಯೇಂದ್ರ ಜೈನ್’ಗೆ 14 ದಿನ ನ್ಯಾಯಾಂಗ ಬಂಧನ

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಎಪಿ ಮುಖಂಡ, ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ರಾವುಜ್ ಅವೆನ್ಯೂ ಕೋರ್ಟ್‌ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಇಂದಿನ ವರೆಗೂ ಕೋರ್ಟ್‌ ಜಾರಿ ನಿರ್ದೇಶನಾಲಯದ (ಇ.ಡಿ) ವಶಕ್ಕೆ ನೀಡಿತ್ತು.

ಕಳೆದ ವಾರ ಜೈನ್‌ ಅವರ ನಿವಾಸ ಮತ್ತು ಸಂಬಂಧಿತ ಇತರ ಸ್ಥಳಗಳಲ್ಲಿ ಇ.ಡಿ ಶೋಧ ಕಾರ್ಯಾಚರಣೆ ನಡೆಸಿತ್ತು. ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ₹2.85 ಕೋಟಿ ನಗದು ಮತ್ತು 133 ಚಿನ್ನದ ನಾಣ್ಯಗಳನ್ನು ವಶಕ್ಕೆ ಪಡೆಯಲಾಗಿದೆ.

ಜನರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಮೊಹಲ್ಲಾ ಕ್ಲಿನಿಕ್ ಮಾದರಿಯನ್ನು ಪರಿಚಯಿಸಿದ್ದಕ್ಕಾಗಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಬೇಕು ಎಂದೂ ಕೇಜ್ರಿವಾಲ್‌ ಆಗ್ರಹಿಸಿದ್ದರು.

ಜೈನ್‌ ಅವರು ದೆಹಲಿಯ ಆರೋಗ್ಯ, ಕೈಗಾರಿಕೆ, ವಿದ್ಯುತ್‌, ಗೃಹ, ನಗರಾಭಿವೃದ್ಧಿ ಮತ್ತು ಜಲಸಂಪನ್ಮೂಲ ಸಚಿವರಾಗಿದ್ದಾರೆ.