Friday, 13th December 2024

ಎರಡು ಟ್ರಕ್​ಗಳಿಗೆ ಲಾರಿ ಡಿಕ್ಕಿ: ಐವರು ಸಜೀವ ದಹನ

ಜೈಪುರ: ರಾಜಸ್ಥಾನದ ಜೈಪುರ-ಅಜ್ಮೀರ್ ರಸ್ತೆಬದಿಯಲ್ಲಿ ನಿಂತಿದ್ದ ಎರಡು ಟ್ರಕ್​ಗಳಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಐವರು ಸಜೀವ ದಹನಗೊಂಡ ಘಟನೆ ನಡೆದಿದೆ.

ದನಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಸೇರಿದಂತೆ ಎಲ್ಲಾ ಮೂರು ವಾಹನಗಳು ಸುಟ್ಟು ಹೋಗಿದ್ದು 12 ಗೋವುಗಳು ಸಹ ಸುಟ್ಟು ಕರಕಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಕ್ಕಿಯ ನಂತರ ಉಂಟಾದ ಬೆಂಕಿ ಎಲ್ಲಾ ಮೂರು ಟ್ರಕ್‌ಗಳನ್ನುಆವರಿಸಿತ್ತುಈ ಘಟನೆ ಯಲ್ಲಿ ಒಂದು ಟ್ರಕ್‌ನ ಚಾಲಕ ಸೇರಿದಂತೆ ಐದು ಜನರು ಬೆಂಕಿಯಲ್ಲಿ ಸಜೀವ ದಹನವಾಗಿದ್ದಾರೆ ಎಂದು ಜೈಪುರ ಗ್ರಾಮಾಂತರ ಹೆಚ್ಚುವರಿ ಪೊಲೀಸ್ ಅಧೀಕ್ಷಕ ದಿನೇಶ್ ಶರ್ಮಾ ತಿಳಿಸಿದ್ದಾರೆ.

ಮೃತರನ್ನು ಹರ್ಯಾಣದ ಪವನ್(28), ಸಂಜು(18), ಧರಮ್‌ವೀರ್(34) ಮತ್ತು ಬಿಹಾ ರದ ಛಾಪ್ರಾ ಮೂಲದ ಜಾನ್ ವಿಜಯ್ (35) ಮತ್ತು ಬಿಜ್ಲಿ (26) ಎಂದು ಗುರುತಿಸ ಲಾಗಿದೆ.

ಎರಡು ಟ್ರಕ್‌ಗಳು ರಸ್ತೆಬದಿಯಲ್ಲಿ ನಿಂತಿದ್ದವು. ಹರಿಯಾಣದಿಂದ ಪುಣೆಗೆ ಜಾನುವಾರು ಗಳನ್ನು ಸಾಗಿಸುತ್ತಿದ್ದ ಲಾರಿ ಅವುಗಳಲ್ಲಿ ಒಂದಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನ ನಿದ್ರೆಯ ಮಂಪರು ಈ ಅಪಘಾತಕ್ಕೆ ಕಾರಣ ವಾಗಿರಬಹುದು ಎಂದು ಅಧಿಕಾರಿ ಹೇಳಿದ್ದಾರೆ.

ಫೋರೆನ್ಸಿಕ್ ತಂಡವು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದು, ಮರಣೋತ್ತರ ಪರೀಕ್ಷೆಯನ್ನೂ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.