Saturday, 14th December 2024

ವಿದೇಶಿ ಮಹಿಳಾ ಪ್ರವಾಸಿಗೆ ಲೈಂಗಿಕ ಕಿರುಕುಳ

ಜೈಪುರ: ಜೈಪುರದಲ್ಲಿ ವ್ಯಕ್ತಿಯೊಬ್ಬ ವಿದೇಶಿ ಮಹಿಳಾ ಪ್ರವಾಸಿಗೆ ಲೈಂಗಿಕ ಕಿರುಕುಳ ನೀಡಿದ್ದು, ಲೈವ್ ವೀಡಿಯೋ ಮಾಡುವಾಗಲೇ ವಿದೇಶಿ ಮಹಿಳೆಯ ಮೈಮುಟ್ಟಿ ಕಿರುಕುಳ ನೀಡಿರುವ ವಿಡಿಯೋ ವ್ಯಾಪಕ ವೈರಲ್ ಆಗಿದೆ.

ರಾಜಸ್ಥಾನದಲ್ಲಿ ವಿದೇಶಿ ಮಹಿಳಾ ಪ್ರವಾಸಿಯನ್ನು ಅನುಚಿತವಾಗಿ ಸ್ಪರ್ಶಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ರಾಜಸ್ಥಾನದ ಜೈಪುರ ನಗರದ ಸಿಂಧಿ ಕ್ಯಾಂಪ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ವ್ಯಕ್ತಿ ಮಹಿಳೆಯ ಭುಜ-ಎದೆ ಮೇಲೆ ಕೈ ಹಾಕುವ ಮೊದಲು ” ಇಟ್ಸ್​ ಮೈ ಪ್ಲಸರ್​​’’ ಎಂದು ಹೇಳುತ್ತಿದ್ದಾನೆ. ಹಾಗೆ ಸಂತೋಷ ಎನ್ನುತ್ತಲೇ ಮತ್ತೊಂದು ಕಡೆಯಿಂದ ಮಹಿಳಾ ಪ್ರವಾಸಿಯ ಇನ್ನೊಂದು ತೋಳನ್ನು ಹಿಡಿಯುತ್ತಾನೆ. ಒಂದು ಕ್ಷಣದಲ್ಲಿ ಅವರ ದೇಹದ ಇತರ ಭಾಗಗಳನ್ನು ಸ್ಪರ್ಶಿಸುವ ಯತ್ನ ಮಾಡುತ್ತಾನೆ. ಈ ವಿಡಿಯೋಗೆ ಟ್ವೀಟಿಗರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.