Thursday, 12th December 2024

ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಇಬ್ಬರು ಉಗ್ರರ ಬಂಧನ

ಶ್ರೀನಗರ(ಜಮ್ಮು ಮತ್ತು ಕಾಶ್ಮೀರ): ಅವಂತಿಪೋರಾದಲ್ಲಿ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಬಂಧನಕ್ಕೊಳಪಡಿಸಲಾಗಿದೆ.

ಅನುಮಾನಾಸ್ಪದ ಓಡಾಟ ಕಂಡು ಬಂದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭದ್ರತಾಪಡೆಗಳು ಜಂಟಿ ಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು.

ಕಳೆದ ಗುರುವಾರ ಈ ತಿಂಗಳಾಂತ್ಯಕ್ಕೆ ನಡೆಯಲಿರುವ ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆ ವೇಳೆ ಭಾರೀ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ನಾಲ್ವರು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರನ್ನು ಸಿಆರ್’ಪಿಎಫ್ ಯೋಧರು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಿದ್ದರು.

ಜಮ್ಮು ನಗರದ ಹೊರವಲಯದ ಟೋಲ್ ಪ್ಲಾಜಾ ಬಳಿ ಪಾಕಿಸ್ತಾನದಿಂದ ಒಳನುಸುಳಿ ಬಂದಿದ್ದ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿತ್ತು.