ಗುಜರಾತ್: ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ಮೃತಪಟ್ಟಿರುವ ಘಟನೆ ಗುಜರಾತ್‌ನ ಜಾಮ್‌ನಗರದಲ್ಲಿ ನಡೆದಿದೆ.
ಜಾಮ್‌ನಗರ ನಗರದಿಂದ 40 ಕಿ.ಮೀ ದೂರದಲ್ಲಿರುವ ತಮಾಚನ್ ಗ್ರಾಮದ ಜಮೀನಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಬುಡಕಟ್ಟು ಕುಟುಂಬಕ್ಕೆ ಸೇರಿದ 2 ವರ್ಷದ ಹೆಣ್ಣು ಮಗು ಶನಿವಾರ ಬೆಳಗ್ಗೆ 9:30 ಗಂಟೆಯ ಸುಮಾರಿಗೆ ಆಟವಾಡುತ್ತಿದ್ದಾಗ ಕೃಷಿ ಜಮೀನಲ್ಲಿದ್ದ 200 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದಿದೆ.
ಘಟನೆ ತಿಳಿದ ಬಳಿಕ ರಕ್ಷಣಾ ಕಾರ್ಯಾಚರಣೆಗೆ ಎನ್ ಡಿಆರ್ ಎಫ್ ಸೇರಿದಂತೆ ಇತರ ಸಿಬ್ಬಂದಿಗಳು ಜೊತೆಯಾಗಿದ್ದಾರೆ.
20 ಆಳದಲ್ಲಿ ಸಿಲುಕಿದ್ದ ಮಗುವನ್ನು ಸತತ 19 ಗಂಟೆಗಳ ಕಾರ್ಯಾಚರಣೆಯ ಬಳಿಕ ಭಾನುವಾರ ಹೊರ ತೆಗೆಯಲಾಯಿತು. ಪರೀಕ್ಷಿಸಿದ ಬಳಿಕ ಮಗು ಮೃತಪಟ್ಟಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.