Saturday, 14th December 2024

ಜನಾರ್ಧನ ರೆಡ್ಡಿಗೆ ಷರತ್ತುಬದ್ಧ ಅನುಮತಿ

ನವದೆಹಲಿ : ಅಕ್ರಮ ಗಣಿ ಪ್ರಕರಣದಲ್ಲಿ ಬಳ್ಳಾರಿಗೆ ತೆರಳದಂತೆ ಆದೇಶ ಕೋರಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಗುರುವಾರ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ತೆರಳಲು ಷರತ್ತುಬದ್ಧ ಅನುಮತಿ ನೀಡಿದೆ.

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ವಿನೀತ್ ಶರಣ್ ಅವರಿದ್ಧ ನ್ಯಾಯಪೀಠವು, ಬಳ್ಳಾರಿಗೆ ಹೋದಾಗಲೆಲ್ಲಾ ಎಸ್ಪಿಗೆ ಮಾಹಿತಿ ನೀಡುವಂತೆ ಷರತ್ತು ವಿಧಿಸಿ, ಬಳ್ಳಾರಿಗೆ ತೆರಳಲು ಅನುಮತಿಸಿದೆ.

ಅಕ್ರಮ ಗಣಿ ಪ್ರಕರಣದಲ್ಲಿ ಜನಾರ್ಧನ ರೆಡ್ಡಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದರು. ಬಳ್ಳಾರಿಗೆ ತೆರಳದಂತೆ ಷರತ್ತು ವಿಧಿಸಿತ್ತು.