ನವದೆಹಲಿ: ಕರೋನಾ ಸೋಂಕಿನ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯನ್ನು ಮುಂದೂಡಲಾಗಿದೆ.
ಈಗಾಗಲೇ ಜುಲೈ 30ರಂದು ಪರೀಕ್ಷೆ ನಿಗದಿಯಾಗಿತ್ತು. ಕೋವಿಡ್ ಬಿಕ್ಕಟ್ಟಿನ ಕಾರಣ ಪರೀಕ್ಷೆ ಮುಂದೂಡಲಾಗಿದ., ಪರಿಷ್ಕೃತ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.
ಜೆಇಇ ಮುಖ್ಯ ಪರೀಕ್ಷೆಯನ್ನು ಈಗಾಗಲೇ ಮುಂದೂಡಲಾಗಿದೆ. ಪರೀಕ್ಷೆಯ ಮೊದಲ ಎರಡು ಹಂತ ಕಳೆದ ಫೆಬ್ರವರಿ ಮತ್ತು ಮಾರ್ಚ್ ನಲ್ಲಿ ಮುಗಿದಿದೆ. ಈ ತಿಂಗಳು 27ರಿಂದ ಮೂರು ದಿನಗಳ ಕಾಲ ಜೆಇಇ ಮುಖ್ಯ ಪರೀಕ್ಷೆ ನಡೆಯಬೇಕಾಗಿತ್ತು.
ಪರಿಷ್ಕೃತ ಪರೀಕ್ಷಾ ದಿನಾಂಕವನ್ನು ಪರೀಕ್ಷೆಗಿಂತ 15 ದಿವಸ ಮೊದಲು ಪ್ರಕಟಿಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್ ಟಿಎ) ತಿಳಿಸಿದೆ. ಐಸಿಎಸ್‌ಇ 10 ಹಾಗೂ 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.