Sunday, 8th September 2024

JK Election: ಜಮ್ಮು ಕಾಶ್ಮೀರ ಚುನಾವಣೆ; ಸಮೀಕ್ಷೆ ಹೇಳೋದೇನು?

JK Election

ಶ್ರೀನಗರ:  ಬರೋಬ್ಬರಿ ಹತ್ತು ವರ್ಷಗಳ ನಂತರ ಚುನಾವಣೆ(JK Election) ನಡೆಯುತ್ತಿರುವ ಜಮ್ಮು ಮತ್ತು ಕಾಶ್ಮೀರ(Jammu-Kashmir) ವಿಧಾನಸಭೆ ಚುನಾವಣೆ(Assembly Election) ದೇಶದ ಗಮನ ಸೆಳೆದಿದೆ. ಇದೀಗ ಚುನಾವಣಾ ಪೂರ್ವ ಸಮೀಕ್ಷೆಯೊಂದು ಹೊರಬಿದ್ದಿದ್ದು, ಈ ಬಾರಿ ಬಿಜೆಪಿಗೆ ತೀರ ಮುಖಭಂಗವಾಗುವ ಸಾಧ್ಯತೆ ಇದೆ. ಅಲ್ಲದೇ ಕಾಂಗ್ರೆಸ್‌-ಎನ್‌ಸಿ(Congress-NC Alliance) ಮೈತ್ರಿಕೂಟ ಪರ ಜನರ ನಿಲುವು ಹೆಚ್ಚಿದೆ ಎಂಬುದು ಬಯಲಾಗಿದೆ.

90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರದ ವಿಧಾಸಭೆ ಚುನಾವಣೆ ಕುರಿತು Election Tracker ಮತದಾರರ ಅಭಿಪ್ರಾಯ ಕಲೆಹಾಕಿದೆ. ಜಮ್ಮು-ಕಾಶ್ಮೀರದಲ್ಲಿ Election Tracker ನಡೆಸಿದ ಸಮೀಕ್ಷೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗವಾಗಿದ್ದು, ಇಂಡಿಯಾ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ. 90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಹಾಗೂ ನ್ಯಾಷನಲ್ ಕಾನ್ಫರೆನ್ಸ್ 45 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಹೇಳಿದೆ.

ಈ ಬಾರಿ ಜಮ್ಮು ಮತ್ತು ಕಾಶ್ಮೀರದ ವಿಧಾಸಭೆ ಚುನಾವಣೆಗೆ ಒಟ್ಟು ಮೂರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಸೆ.18, ಸೆ.25 ಮತ್ತುಅ.1ರಂದು ದಿನಾಂಕ ನಿಗದಿಪಡಿಸಲಾಗಿದೆ.  ವಿಧಾನಸಭಾ ಚುನಾವಣೆಯ ದಿನಾಂಕಗಳಲ್ಲಿ ಚುನಾವಣಾ ಆಯೋಗವು ಕೆಲವು ಬದಲಾವಣೆಗಳನ್ನು ಮಾಡಿದೆ. ಚುನಾವಣಾ ಫಲಿತಾಂಶವನ್ನು ಅಕ್ಟೋಬರ್ 4 ರ ಬದಲು ಅಕ್ಟೋಬರ್ 8 ರಂದು ಪ್ರಕಟಿಸಲು ಇಸಿ ನಿರ್ಧರಿಸಿದೆ.

ಸೆಪ್ಟೆಂಬರ್ 18 ರಂದು ರಾಜ್ಯದ 24 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ.  ಸೆಪ್ಟೆಂಬರ್ 25 ರಂದು ಜಮ್ಮು ಮತ್ತು ಕಾಶ್ಮೀರದ 26 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 1 ರಂದು ಜಮ್ಮು ಮತ್ತು ಕಾಶ್ಮೀರದ 40 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. ಇನ್ನೂ ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಇದೇ ಮೊದಲ ಬಾರಿ ಚುನಾವಣೆ ನಡೆಯುತ್ತಿದ್ದು, ಈ ಚುನಾವಣೆ ಬಿಜೆಪಿಗೆ ನಿರ್ಣಾಯಕವಾಗಿದೆ.

ಈ ಬಾರಿ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP) ಮತ್ತು ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟದ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಸೀಟು ಹಂಚಿಕೆಯಲ್ಲಿ ಇನ್ನೂ ಭಿನ್ನಾಭಿಪ್ರಾಯಗಳನ್ನು ಹೊರಹಾಕಿಲ್ಲ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ (Mehbooba Mufti) ನೇತೃತ್ವದ ಪಿಡಿಪಿ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ವಿಧಾನಸಭೆ ಚುನಾವಣೆಯಲ್ಲಿ ಪಿಡಿಪಿ ಅಧಿಕಾರಕ್ಕೆ ಬಂದರೆ ಉಚಿತ 200 ಯೂನಿಟ್ ವಿದ್ಯುತ್ (Free Electricity) ನೀಡುವುದಾಗಿ ಮತ್ತು ಹಳೆಯ ಪಿಂಚಣಿ ಯೋಜನೆ ಯನ್ನು ಜಾರಿಗೊಳಿಸುವುದಾಗಿ ಘೋಷಿಸಿದೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ದತೆ ನಡೆಸಿದ್ದು, ಕಾಂಗ್ರೆಸ್‌ ಹಾಗೂ ಬಿಜೆಪಿ ತಮ್ಮದೇ ಆದ ಹಲವು ತಂತ್ರಗಾರಿಕೆಯನ್ನ ನಡೆಸಿವೆ. ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ, ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ಸ್ಥಳೀಯ ರಾಜಕೀಯ ಪಕ್ಷಗಳು ತಮ್ಮ ತಮ್ಮ ಚುನಾವಣಾ ತಯಾರಿಯಲ್ಲಿ ನಿರತವಾಗಿವೆ.

Leave a Reply

Your email address will not be published. Required fields are marked *

error: Content is protected !!