ಶ್ರೀನಗರ: ಜಮ್ಮು-ಕಾಶ್ಮೀರ(Jammu-Kashmira)ದ ರಾಜ್ಯ ಸ್ಥಾನಮಾನ(JK statehood) ಮರುಸ್ಥಾಪನೆಗಾಗಿ ನೂತನ ಸಿಎಂ ಓಮರ್ ಅಬ್ದುಲ್ಲಾ(Omar Abdullah) ಅವರು ನಿರ್ಣಯವನ್ನು ಪಾಸ್ ಮಾಡಿದ್ದಾರೆ. ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಎರಡೇ ದಿನದಲ್ಲಿ ಸಚಿವ ಸಂಪುಟ ಸಭೆ ಕರೆದಿದ್ದ ಓಮರ್ ಅಬ್ದುಲ್ಲಾ ಅವರು ನಿರ್ಣಯವನ್ನು ಅಂಗೀಕರಿಸಿದ್ದಾರೆ.
ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಮತ್ತು ಸಚಿವರಾದ ಸಕೀನಾ ಮಸೂದ್ ಇಟೂ, ಜಾವೇದ್ ಅಹ್ಮದ್ ರಾಣಾ, ಜಾವೈದ್ ಅಹ್ಮದ್ ದಾರ್ ಮತ್ತು ಸತೀಶ್ ಶರ್ಮಾ ಉಪಸ್ಥಿತರಿದ್ದರು. ನಿರ್ಣಯದ ಕರಡನ್ನು ಸಿದ್ಧಪಡಿಸಲಾಗಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ನಿರ್ಣಯದ ಕರಡನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಸ್ತಾಂತರಿಸಲು ಮುಖ್ಯಮಂತ್ರಿಗಳು ಒಂದೆರಡು ದಿನಗಳಲ್ಲಿ ನವದೆಹಲಿಗೆ ತೆರಳಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ
Omar Abdullah's first resolution on statehood is nothing less than ratification of the August 5th, 2019 decision. No resolution on Article 370 and scaling down the demand to mere statehood is a huge setback, especially after seeking votes on the promise of restoring Article 370.
— Waheed Para (@parawahid) October 18, 2024
ಇನ್ನು ವಿಧಾನಸಭೆ ಚುನಾವಣೆಗೂ ಮುನ್ನ ಪಕ್ಷದ ಪ್ರಣಾಳಿಕೆಯಲ್ಲೇ ಆರ್ಟಿಕಲ್ 370ಯನ್ನು ಮರುಸ್ಥಾಪಿಸಿ ಮತ್ತೆ ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವುದಾಗಿ ಘೋಷಣೆ ಹೊರಡಿಸಿದ್ದರು. ನಾವು 370 ನೇ ವಿಧಿಗಾಗಿ ರಾಜಕೀಯವಾಗಿ ಹೋರಾಡುವುದನ್ನು ಮುಂದುವರಿಸುತ್ತೇವೆ. ಈ ವಿಷಯಗಳ ಬಗ್ಗೆ ನಾವು ಮೌನವಾಗಿರುವುದಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖಂಡರು ತಿಳಿಸಿದ್ದರು.
ಮತ್ತೊಂದೆಡೆ ಜಮ್ಮು-ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಪುನರ್‌ಸ್ಥಾಪಿಸಲು ಕೋರಿ ಸುಪ್ರೀಂ ಕೋರ್ಟ್(Supreme Court)ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಈ ಅರ್ಜಿಗಳ ತುರ್ತು ವಿಚಾರಣೆ ನಡೆಸಲು ಕೋರ್ಟ್ ಸಮ್ಮತಿ ಸೂಚಿಸಿದೆ. ನ್ಯಾಯವಾದಿ ಗೋಪಾಲ್ ಶಂಕರನಾರಾಯಣ ಅವರು ಈ ಅರ್ಜಿಯನ್ನು ಸಲ್ಲಿಸಿದ್ದು, ಈ ವಿಷಯದ ಕುರಿತು ತ್ವರಿತ ಕ್ರಮದ ಅಗತ್ಯವನ್ನು ಉಲ್ಲೇಖಿಸಿ, ನಿಗದಿತ ಕಾಲಮಿತಿಯೊಳಗೆ ಪ್ರದೇಶದ ರಾಜ್ಯತ್ವವನ್ನು ಮರುಸ್ಥಾಪಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಗೋಪಾಲ್ ಶಂಕರನಾರಾಯಣ್ ಅವರ ಮನವಿಯನ್ನು ಪುಸ್ಕರಿಸಿದ ಕೋರ್ಟ್ ಶೀಘ್ರವೇ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ. ಶಂಕರನಾರಾಯಣನ್ ಮನವಿಯನ್ನು ಪರಿಗಣಿಸಲು ಸಿಜೆಐ ಚಂದ್ರಚೂಡ್ ಅವರು ಒಪ್ಪಿಕೊಂಡರು. ಜಮ್ಮು-ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನ ಮರುಸ್ಥಾಪಿಸದಿರುವುದು ಸಂವಿಧಾನವನ್ನು ಉಲ್ಲಂಘನೆ ಎಂದು ಅರ್ಜಿದಾರರು ವಾದಿಸಿದರು. ವಿಧಾನಸಭೆ ಚುನಾವಣೆ ಶಾಂತಿಯುತವಾಗಿ ನಡೆದಿದ್ದು, ರಾಜ್ಯ ಸ್ಥಾನಮಾನ ಮರುಸ್ಥಾಪನೆಗೆ ಯಾವುದೇ ಅಡ್ಡಿ ಇಲ್ಲ ಎಂಬುದನ್ನು ತೋರಿಸುತ್ತದೆ ಎಂದು ಅರ್ಜಿದಾರರು ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ: Sadguru Jaggi Vasudev: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾ! ಸುಪ್ರೀಂ ಮಹತ್ವದ ತೀರ್ಪು- ಸದ್ಗುರುಗೆ ಬಿಗ್ ರಿಲೀಫ್