Thursday, 12th December 2024

ಸೆಪ್ಟೆಂಬರ್ 18ರಂದು ಮೊದಲ ಹಂತದ ಚುನಾವಣೆ: ಬಿಜೆಪಿ ಮೊದಲ ಪಟ್ಟಿ ಪ್ರಕಟ

ವದೆಹಲಿ: 90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಸೆಪ್ಟೆಂಬರ್ 18ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಗೆ 15 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಸೋಮವಾರ ಪ್ರಕಟಿಸಿದೆ.

ಇದಕ್ಕೂ ಮೊದಲು ಒಂದು ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿತ್ತು. ಈ ಪಟ್ಟಿಯಲ್ಲಿ ಎರಡನೇ ಹಂತದ 10 ಕ್ಷೇತ್ರಗಳಿಗೆ ಹಾಗೂ ಮೂರನೇ ಹಂತದ 19 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿತ್ತು. ಆದರೆ ಕೆಲವೇ ಗಂಟೆಗಳಲ್ಲಿ ಆ ಪಟ್ಟಿಯನ್ನು ಹಿಂಪಡೆಯಲಾಗಿತ್ತು.

ಮೊದಲ ಪಟ್ಟಿಯಲ್ಲಿ ಕಾಶ್ಮೀರದ ಪಾಂಪೋರ್, ಶೋಪಿಯಾನ, ಅನಂತನಾಗ್ ಪಶ್ಚಿಮ ಹಾಗೂ ಅನಂತನಾಗ್ ಸೇರಿದಂತೆ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ.

ಒಟ್ಟು 90 ಕ್ಷೇತ್ರಗಳ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಚುನಾವಣೆಯ ಅಧಿಸೂಚನೆಯನ್ನು ಈಚೆಗೆ ಚುನಾವಣಾ ಆಯೋಗವು ಪ್ರಕಟಿಸಿದೆ.

ಸೆ. 18ರಂದು 24 ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಸೆ. 25ರಂದು 2ನೇ ಹಂತ ಹಾಗೂ ಅ. 1ರಂದು ಮೂರನೇ ಮತ್ತು ಅಂತಿಮ ಹಂತದ ಚುನಾವಣೆ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ‌ನಡೆಯಲಿದೆ.

ಜಮ್ಮು-ಕಾಶ್ಮೀರದಲ್ಲಿ 2014ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿತ್ತು.