Friday, 13th December 2024

ಜೆಎನ್‌ಯು ಕ್ಯಾಂಪಸ್‌ನಲ್ಲಿ ಮಹಿಳೆ ಸಾವು

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ವಾಸಿಸುತ್ತಿದ್ದ 26 ವರ್ಷದ ಮಹಿಳೆ ನಿಗೂಢವಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಹಾರದ ಬಕ್ಸಾರ್ ನಿವಾಸಿ ಮಾಧುರಿ ಕುಮಾರಿ, ವಿಶ್ವವಿದ್ಯಾಲಯದ ಆವರಣದೊಳಗಿನ ಬ್ರಹ್ಮಪುತ್ರ ಹಾಸ್ಟೆಲ್‌ನಲ್ಲಿ ಪತಿಯೊಂದಿಗೆ ವಾಸಿಸುತ್ತಿದ್ದು, ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಹಾಸ್ಟೆಲ್‌ನ ಎರಡನೇ ಮಹಡಿಯಿಂದ ಜಿಗಿದು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಇನ್ನಷ್ಟೇ ತಿಳಿದು ಬರಬೇಕಿದೆ.

ಹಾಸ್ಟೆಲ್ ಮೇಲಿನಿಂದ ಮಹಿಳೆ ಬಿದ್ದಿದ್ದು ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಸ್ಪಷ್ಟ ಪಡಿಸಿದ್ದಾರೆ.