Tuesday, 7th January 2025

Job Guide: ರಕ್ಷಣಾ ಸಚಿವಾಲಯದಲ್ಲಿದೆ 113 ಹುದ್ದೆ; 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

Job Guide

ಬೆಂಗಳೂರು: ಭಾರತ ಸರ್ಕಾರದ ರಕ್ಷಣಾ ಸಚಿವಾಲಯ(Ministry of Defence)ದಲ್ಲಿ ಖಾಲಿ ಇರುವ ಗ್ರೂಪ್‌ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (Ministry of Defence Recruitment 2025). ಅಕೌಂಟೆಂಟ್‌, ಸ್ಟೆನೋಗ್ರಾಫರ್‌ ಗ್ರೇಡ್‌-I, ಲೋಬರ್‌ ಡಿವಿಷನ್‌ ಕ್ಲರ್ಕ್‌ ಸೇರಿ ಒಟ್ಟು 113 ಹುದ್ದೆಗಳಿವೆ. 10ನೇ ತರಗತಿ, ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಜ. 7ರಿಂದ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಫೆ. 6 (Job Guide).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಕೌಂಟೆಂಟ್ – 1 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ, ಪದವಿ
ಸ್ಟೆನೋಗ್ರಾಫರ್ ಗ್ರೇಡ್-1 – 1 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಲೋವರ್ ಡಿವಿಷನ್ ಕ್ಲರ್ಕ್ – 11 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಸ್ಟೋರ್ ಕೀಪರ್ – 24 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಫೋಟೊಗ್ರಾಫರ್‌ – 1 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ, ಡಿಪ್ಲೊಮಾ
ಫೈರ್ ಮ್ಯಾನ್ – 5 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಕುಕ್ – 4 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಲ್ಯಾಬ್ ಅಟೆಂಡೆಂಟ್ – 1 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಮಲ್ಟಿ-ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) – 29 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಟ್ರೇಡ್ಸ್‌ಮ್ಯಾನ್‌ ಮೇಟ್ – 31 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ವಾಷರ್‌ಮ್ಯಾನ್‌ – 2 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಕಾರ್ಪೆಂಟರ್ & ಜಾಯಿನರ್ – 2 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಟಿನ್ ಸ್ಮಿತ್ – 1 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ

ವಯೋಮಿತಿ ಮತ್ತು ಅರ್ಜಿ ಶುಲ್ಕ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 18ರಿಂದ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಎಚ್‌ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಯಾವುದೇ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ ವಿವಿಧ ಹುದ್ದೆಗಳಿಗೆ ಅನುಗುಣವಾಗಿ 18,000 ರೂ. – 92,300 ರೂ. ಮಾಸಿಕ ವೇತನ ದೊರೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
    (https://mod.gov.in/)
  • ಹೆಸರು ನೋಂದಾಯಿಸಿ.
  • ಎಚ್ಚರಿಕೆಯಿಂದ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಸರಿಯಾದ ಅಳತೆಯಲ್ಲಿ ಫೋಟೊ ಅಪ್‌ಲೋಡ್‌ ಮಾಡಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಈ ಸುದ್ದಿಯನ್ನೂ ಓದಿ: CBSE Recruitment 2025: CBSEಯಲ್ಲಿ ಖಾಲಿ ಇದೆ 212 ಹುದ್ದೆ; ದ್ವಿತೀಯ ಪಿಯು ಪಾಸಾದವರು ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *