ಬೆಂಗಳೂರು: ನ್ಯಾಷನಲ್ ಹೈಡ್ರೋಎಲೆಕ್ಟ್ರಿಕ್ ಪವರ್ ಕಾರ್ಪೋರೇಷನ್ (National Hydroelectric Power Corporation) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (NHPC Recruitment 2024-2025). ಟ್ರೈನಿ ಆಫೀಸರ್, ಸೀನಿಯರ್ ಮೆಡಿಕಲ್ ಆಫೀಸರ್ ಸೇರಿ ಒಟ್ಟು 118 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಪದವಿ, ಸ್ನಾತಕೋತ್ತರ ಪದವಿ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಡಿ. 30 (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಟ್ರೈನಿ ಆಫೀಸರ್ (ಎಚ್‌ಆರ್)-71 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ, ಎಂಎಸ್‌ಡಬ್ಲ್ಯು, ಎಂಬಿಎ
ಟ್ರೈನಿ ಆಫೀಸರ್ (ಪಿಆರ್)-10 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ
ಟ್ರೈನಿ ಆಫೀಸರ್ (ಲಾ)-12 ಹುದ್ದೆ, ವಿದ್ಯಾರ್ಹತೆ: ಎಲ್‌ಎಲ್‌ಬಿ
ಸೀನಿಯರ್ ಮೆಡಿಕಲ್ ಆಫೀಸರ್-25 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್
ವಯೋಮಿತಿ
ಟ್ರೈನಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 30 ವರ್ಷ ಮತ್ತು ಸೀನಿಯರ್ ಮೆಡಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ-ಎನ್‌ಸಿಎಲ್) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಬಿಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ/ಮಹಿಳೆ/ಮಾಜಿ ಯೋಧರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಯುಆರ್/ಇಡಬ್ಲ್ಯುಎಸ್/ಒಬಿಸಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 708 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಗೇಟ್ (GATE) ಅಂಕ, ಗ್ರೂಪ್ ಡಿಸ್ಕಷನ್ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಟ್ರೈನಿ ಆಫೀಸರ್ ಹುದ್ದೆಗಳಿಗೆ 50,000 ರೂ.-1,60,000 ರೂ. ಮತ್ತು ಸೀನಿಯರ್ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ 60,000 ರೂ. – 1,80,000 ರೂ. ಮಾಸಿಕ ವೇತನ ದೊರೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
NHPC Recruitment 2024-2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://intranet.nhpc.in/RecruitApp/english/scripts/recruitappreg_selcandtp.aspx?id=33) - ಹೆಸರು ನೋಂದಾಯಿಸಿ.
- ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ಡಾಕ್ಯುಮೆಂಟ್ ಅಪ್‌ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್ ವಿಳಾಸ: https://www.nhpcindia.com/ಗೆ ಭೇಟಿ ನೀಡಿ.
ಈ ಸುದ್ದಿಯನ್ನೂ ಓದಿ: Job Guide: ಪದವೀಧರರಿಗೆ ಗುಡ್‌ನ್ಯೂಸ್; ಜನರಲ್ ಇನ್ಶೂರೆನ್ಸ್ ಕಾರ್ಪೋರೇಷನ್ ಆಫ್ ಇಂಡಿಯಾದಲ್ಲಿದೆ 110 ಹುದ್ದೆ; ಹೀಗೆ ಅಪ್ಲೈ ಮಾಡಿ