Thursday, 19th December 2024

Job Guide: 10ನೇ ತರಗತಿ, ಐಟಿಐ ಪಾಸಾದವರಿಗೆ ಗುಡ್‌ನ್ಯೂಸ್‌; ಕೊಚ್ಚಿ ಶಿಪ್‌ಯಾರ್ಡ್‌ನಲ್ಲಿದೆ 224 ಹುದ್ದೆ

Job Guide

ಬೆಂಗಳೂರು: ಕೇರಳದ ಕೊಚ್ಚಿಯ ಶಿಪ್‌ಯಾರ್ಡ್‌ ಲಿಮಿಟೆಡ್‌ (Cochin Shipyard Limited)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಶೀಟ್‌ ಮೆಟಲ್‌ ವರ್ಕರ್‌, ವೆಲ್ಡರ್‌, ಮೆಕ್ಯಾನಿಕಲ್‌ ಡೀಸೆಲ್‌, ಪ್ಲಂಬರ್‌ ಸೇರಿ ಒಟ್ಟು 224 ಹುದ್ದೆಗಳಿವೆ (Cochin Shipyard Limited Recruitment 2024-2025). ಉದ್ಯೋಗ ಸ್ಥಳ: ಕೊಚ್ಚಿ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಡಿ. 30 (Job Guide).

ಉದ್ಯೋಗದ ವಿವರ ಮತ್ತು ವಿದ್ಯಾರ್ಹತೆ

ಶೀಟ್ ಮೆಟಲ್ ವರ್ಕರ್ – 42 ಹುದ್ದೆ
ವೆಲ್ಡರ್ – 2 ಹುದ್ದೆ
ಮೆಕ್ಯಾನಿಕಲ್ ಡೀಸೆಲ್ – 11 ಹುದ್ದೆ
ಮೆಕ್ಯಾನಿಕ್ ಮೋಟಾರು ವಾಹನ – 5 ಹುದ್ದೆ
ಪ್ಲಂಬರ್ – 20 ಹುದ್ದೆ
ಪೈಂಟರ್‌ – 17 ಹುದ್ದೆ
ಎಲೆಕ್ಟ್ರಿಷಿಯನ್ – 36 ಹುದ್ದೆ
ಎಲೆಕ್ಟ್ರಾನಿಕ್ ಮೆಕ್ಯಾನಿಕ್ – 32 ಹುದ್ದೆ
ಇನ್ಸ್ಟ್ರುಮೆಂಟ್ ಮೆಕ್ಯಾನಿಕ್ – 38 ಹುದ್ದೆ
ಶಿಪ್ ರೈಟ್ ವುಡ್ – 7 ಹುದ್ದೆ
ಮೆಕ್ಯಾನಿಸ್ಟ್‌ – 13 ಹುದ್ದೆ
ಫಿಟ್ಟರ್ – 1 ಹುದ್ದೆ
ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿ ಅಥವಾ ವಿಶ್ವ ವಿದ್ಯಾನಿಲಯದಿಂದ 10ನೇ ತರಗತಿ ಮತ್ತು ಐಟಿಐ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಜತೆಗೆ ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು.

ವಯೋಮಿತಿ

ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ಗರಿಷ್ಠ ವಯಸ್ಸು 45 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಇತರ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 600 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್‌.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಅಬ್ಜೆಕ್ಟಿವ್‌ ಟೈಪ್‌ ಆನ್‌ಲೈನ್‌ ಟೆಸ್ಟ್‌, ಪ್ರಾಕ್ಟಿಕಲ್‌ ಟೆಸ್ಟ್‌ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 23,300 ರೂ. ಮಾಸಿಕ ವೇತನ ದೊರೆಯಲಿದೆ. ಇದು ಗುತ್ತಿಗೆ ಆಧಾರಿತ ಉದ್ಯೋಗವಾಗಿದ್ದು, ಇದರ ಅವಧಿ: 5 ವರ್ಷ ಎಂದು ಅಧಿಸೂಚನೆ ತಿಳಿಸಿದೆ.

Cochin Shipyard Limited Recruitment 2024-2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
    (https://cdn.digialm.com//EForms/configuredHtml/32530/92133/Registration.html)
  • ಹೆಸರು ನೋಂದಾಯಿಸಿ.
  • ಎಚ್ಚರಿಕೆಯಿಂದ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಸರಿಯಾದ ಅಳತೆಯಲ್ಲಿ ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ ವಿಳಾಸ: https://cochinshipyard.in/ಗೆ ಭೇಟಿ ನೀಡಿ.

ಈ ಸುದ್ದಿಯನ್ನೂ ಓದಿ: Job Guide: ನ್ಯೂ ಅಶ್ಯೂರೆನ್ಸ್‌ ಕಂಪೆನಿ ಲಿಮಿಡೆಟ್‌ನಲ್ಲಿದೆ 500 ಹುದ್ದೆ; ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಿ