ಬೆಂಗಳೂರು: ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ ಇಲ್ಲಿದೆ. ನ್ಯೂ ಅಶ್ಯೂರೆನ್ಸ್ ಕಂಪೆನಿ ಲಿಮಿಡೆಟ್ (New India Assurance Company Limited) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 500 ಅಸಿಸ್ಟಂಟ್ ಹುದ್ದೆಗಳಿವೆ (NIACL Recruitment 2025). ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ 2025ರ ಜ. 1 (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಅಸಿಸ್ಟಂಟ್ ಹುದ್ದೆ ಇದಾಗಿದ್ದು, ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಪದವಿಯಲ್ಲಿ ಇಂಗ್ಲಿಷ್ ಒಂದು ವಿಷಯವಾಗಿ ಓದಿರಬೇಕು. ಅಲ್ಲದೆ ಸ್ಥಳೀಯ ಭಾಷೆ ಓದಲು, ಬರೆಯಲು, ಮಾತನಾಡಲು ತಿಳಿದಿರಬೇಕು. ಕರ್ನಾಟಕದಲ್ಲಿಯೂ ಒಟ್ಟು 50 ಹುದ್ದೆಗಳಿವೆ.
ವಯೋಮಿತಿ
ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ ಎಂದು ಅಧಿಸೂಚನೆ ತಿಳಿಸಿದೆ.
ಅರ್ಜಿ ಶುಲ್ಕ
ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ ಮತ್ತು ಮಾಜಿ ಸೈನಿಕರು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಬೇಕು. ಇತರ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 850 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸ್ಥಳೀಯ ಭಾಷೆಯ ಪರೀಕ್ಷೆ (Preliminary Examination, Main Examination, Regional Language Test) ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 40,000 ರೂ. ಮಾಸಿಕ ವೇತನ ದೊರೆಯಲಿದೆ. ಪ್ರಿಲಿಮಿನರಿ ಪರೀಕ್ಷೆ 2025ರ ಜ. 27 ಮತ್ತು ಮುಖ್ಯ ಪರೀಕ್ಷೆ 2025ರ ಮಾ. 2ರಂದು ನಡೆಯುವ ಸಾಧ್ಯತೆ ಇದೆ. ಪರೀಕ್ಷೆಯ 7 ದಿನಗಳ ಮುನ್ನ ಹಾಲ್ ಟಿಕೆಟ್ ಲಭ್ಯವಾಗಲಿದೆ.
NIACL Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://ibpsonline.ibps.in/niacl5anov24/) - ಹೆಸರು ನೋಂದಾಯಿಸಿ.
- ಎಚ್ಚರಿಕೆಯಿಂದ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ಡಾಕ್ಯುಮೆಂಟ್, ಸರಿಯಾದ ಅಳತೆಯಲ್ಲಿ ಫೋಟೊ ಅಪ್‌ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್ ವಿಳಾಸ: newindia.co.inಗೆ ಭೇಟಿ ನೀಡಿ.
ಈ ಸುದ್ದಿಯನ್ನೂ ಓದಿ: SBI Recruitment 2025: ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್; SBIನಲ್ಲಿದೆ ಬರೋಬ್ಬರಿ 13 ಸಾವಿರ ಹುದ್ದೆ: ಹೀಗೆ ಅಪ್ಲೈ ಮಾಡಿ