ಬೆಂಗಳೂರು: ಒಂದೊಳ್ಳೆ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್ನ್ಯೂಸ್. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited)ನಲ್ಲಿ ಖಾಲಿ ಇರುವ 57 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (HAL Recruitment 2024). ಟೆಕ್ನಿಷಿಯನ್, ಆಪರೇಟರ್ ಹುದ್ದೆಗಳು ಇದಾಗಿದ್ದು, ಡಿಪ್ಲೊಮಾ, ಐಟಿಐ ವಿದ್ಯಾರ್ಹತೆಯವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನ. 24 (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಡಿಪ್ಲೊಮಾ ಟೆಕ್ನಿಷಿಯನ್ (ಮೆಕ್ಯಾನಿಕಲ್) – 8 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಮೆಕ್ಯಾನಿಕಲ್ ಎಂಜಿನಿಯರಿಂಗ್
ಡಿಪ್ಲೊಮಾ ಟೆಕ್ನಿಷಿಯನ್ (ಮೆಕ್ಯಾನಿಕಲ್)- ಎಫ್ಎಸ್ಆರ್ – 2 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಮೆಕ್ಯಾನಿಕಲ್ ಎಂಜಿನಿಯರಿಂಗ್
ಡಿಪ್ಲೊಮಾ ಟೆಕ್ನಿಷಿಯನ್ (ಎಲೆಕ್ಟ್ರಿಕಲ್)- 2 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಎಲೆಕ್ಟ್ರಿಕಲ್ಎಂಜಿನಿಯರಿಂಗ್
ಡಿಪ್ಲೊಮಾ ಟೆಕ್ನಿಷಿಯನ್ (ಎಲೆಕ್ಟ್ರಿಕಲ್)-ಎಫ್ಎಸ್ಆರ್ – 3 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಎಲೆಕ್ಟ್ರಿಕಲ್ಎಂಜಿನಿಯರಿಂಗ್
ಡಿಪ್ಲೊಮಾ ಟೆಕ್ನಿಷಿಯನ್ (ಎಲೆಕ್ಟ್ರಾನಿಕ್ಸ್) – 21 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್
ಡಿಪ್ಲೊಮಾ ಟೆಕ್ನಿಷಿಯನ್ (ಎಲೆಕ್ಟ್ರಾನಿಕ್ಸ್)- ಎಫ್ಎಸ್ಆರ್ – 14 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್
ಡಿಪ್ಲೊಮಾ ಟೆಕ್ನಿಷಿಯನ್ (ಕೆಮಿಕಲ್)- 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಕೆಮಿಕಲ್ ಎಂಜಿನಿಯರಿಂಗ್, ಎಂ.ಎಸ್ಸಿ
ಆಪರೇಟರ್ (ಎಲೆಕ್ಟ್ರಾನಿಕ್ ಮೆಕ್ಯಾನಿಕ್) – 2 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್ ಎಲೆಜ್ಟ್ರಾನಿಕ್ ಮೆಕ್ಯಾನಿಕ್
ಆಪರೇಟರ್ (ಫಿಟ್ಟರ್) – 1 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್ ಫಿಟ್ಟರ್
ಆಪರೇಟರ್ (ಪೇಂಟರ್) – 2 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್ ಪೇಂಟರ್
ಆಪರೇಟರ್ (ಟರ್ನರ್) – 1 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್ ಟರ್ನರ್
ವಯೋಮಿತಿ
ಅಭ್ಯರ್ತಿಗಳ ಗರಿಷ್ಠ ವಯೋಮಿತಿ 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ಎಸ್ಸಿ/ಎಸ್ಟಿ/ಪಿಡಬ್ಲ್ಯುಡಿ, ಹೈದರಾಬಾದ್ನ ಎಚ್ಎಎಲ್ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ/ಒಬಿಸಿ/ಒಬಿಸಿ-ಎನ್ಸಿಎಲ್/ಇಡಬ್ಲ್ಯುಎಸ್ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 200 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್ಲೈನ್. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ ಟೆಕ್ನಿಷಿಯನ್ ಹುದ್ದೆಗೆ 23,000 ರೂ., ಆಪರೇಟರ್ ಹುದ್ದೆಗೆ 22,000 ರೂ. ಮಾಸಿಕ ವೇತನ ದೊರೆಯಲಿದೆ.
HAL Recruitment 2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://hal-v1.exmegov.com/#/index)
- ಹೆಸರು ನೋಂದಾಯಿಸಿ.
- ಹೊಸ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
- ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ಡಾಕ್ಯುಮೆಂಟ್ ಅಪ್ಲೋಡ್ ಮಾಡಿ.
- ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್ಲೋಡ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ಮಾಹಿತಿಗೆ ವೆಬ್ಸೈಟ್ ವಿಳಾಸ: hal-india.co.inಗೆ ಭೇಟಿ ನೀಡಿ ಅಥವಾ ಫೋನ್ ನಂಬರ್ 040-23822231/23822235ಕ್ಕೆ ಕರೆ ಮಾಡಿ.
ಈ ಸುದ್ದಿಯನ್ನೂ ಓದಿ: Job Guide: ಐಟಿಐ, ಡಿಪ್ಲೊಮಾ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ನ್ಯೂಸ್; ಸೀಡ್ಸ್ ಕಾರ್ಪೋರೇಷನ್ನಲ್ಲಿದೆ 188 ಹುದ್ದೆ