ಬೆಂಗಳೂರು: ಭಾರತೀಯ ಸೇನೆಗೆ ಸಾಮಗ್ರಿ ಮತ್ತು ವ್ಯವಸ್ಥಾಪನಾ ಬೆಂಬಲ ಒದಗಿಸುವ ಆರ್ಮಿ ಆರ್ಡಿನೆನ್ಸ್ ಕಾರ್ಪ್ಸ್ (Army Ordnance Corps) ಖಾಲಿ ಇರುವ ವಿವಿಧ ಹುದ್ದೆಗಳ ಬರ್ತಿಗೆ ಅರ್ಜಿ ಆಹ್ವಾನಿಸಿದೆ (Army Ordnance Corps Recruitment 2024). ಮೆಟೀರಿಯಲ್ ಅಸಿಸ್ಟಂಟ್, ಜೂನಿಯರ್ ಆಫೀಸ್ ಅಸಿಸ್ಟಂಟ್, ಟ್ರೇಡ್ಸ್ಮ್ಯಾನ್ ಮೇಟ್ ಸೇರಿ ಒಟ್ಟು 723 ಹುದ್ದೆಗಳಿವೆ. ಡಿಪ್ಲೊಮಾ, ಪದವಿ, 10,12ನೇ ತರಗತಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್ಲೈನ್ ಮೂಲಕ ಡಿ. 2ರಿಂದ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಡಿ. 22 (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಮೆಟೀರಿಯಲ್ ಅಸಿಸ್ಟಂಟ್ (MA) – 19 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ, ಪದವಿ
ಜೂನಿಯರ್ ಆಫೀಸ್ ಅಸಿಸ್ಟಂಟ್ (JOA) – 27 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಸಿವಿಲ್ ಮೋಟರ್ ಡ್ರೈವರ್ (OG) – 4 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಟೆಲಿ ಆಪರೇಟರ್ ಗ್ರೇಡ್ II – 14 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಫೈರ್ಮ್ಯಾನ್ – 247 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಕಾರ್ಪೆಂಟರ್ & ಜಾಯಿನರ್ – 7 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಪೈಂಟರ್ & ಡೆಕೊರೇಟರ್ – 5 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಎಂಟಿಎಸ್ (Multi-Tasking Staff) – 11 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಟ್ರೇಡ್ಸ್ಮ್ಯಾನ್ ಮೇಟ್ – 389 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ವಯೋಮಿತಿ
ವಿವಿಧ ಹುದ್ದೆಗಳಿಗೆ ಅನುಗುಣವಾಗಿ 18ರಿಂದ 27 ವರ್ಷ ವಯೋಮಾನದವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ಯಾವುದೇ ಅಭ್ಯರ್ತಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಮಾಸಿಕ ವೇತನ
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಗುಣವಾಗಿ 18,000 ರೂ. – 92,300 ರೂ. ಮಾಸಿಕ ವೇತನ ದೊರೆಯಲಿದೆ.
Army Ordnance Corps Recruitment 2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://aocrecruitment.gov.in/) - ಹೆಸರು ನೋಂದಾಯಿಸಿ.
- ಹೊಸ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
- ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ಡಾಕ್ಯುಮೆಂಟ್ ಅಪ್ಲೋಡ್ ಮಾಡಿ.
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್ಲೋಡ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್ಸೈಟ್ ವಿಳಾಸ: aocrecruitment.gov.inಗೆ ಭೇಟಿ ನೀಡಿ.
ಈ ಸುದ್ದಿಯನ್ನೂ ಓದಿ: Job Guide: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ನಲ್ಲಿದೆ 84 ಹುದ್ದೆ; ಹೀಗೆ ಅಪ್ಲೈ ಮಾಡಿ