Friday, 13th December 2024

Job Guide: ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನಲ್ಲಿದೆ 77 ಹುದ್ದೆ; ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರು: ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ (Bharat Electronics Limited) ತನ್ನಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BEL Recruitment 2024). ಟ್ರೈನಿ ಎಂಜಿನಿಯರ್‌ – I, ಪ್ರಾಜೆಕ್ಟ್‌ ಎಂಜಿನಿಯರ್‌ – I ಹುದ್ದೆಗಳು ಸೇರಿ ಒಟ್ಟು 77 ಪೋಸ್ಟ್‌ಗಳಿವೆ. ಬಿ.ಎಸ್‌ಸಿ, ಬಿ.ಇ ಓದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನ. 9 (Job Guide).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಟ್ರೈನಿ ಎಂಜಿನಿಯರ್‌ – I (Trainee Engineer-I) – 23 ಮತ್ತು ಪ್ರಾಜೆಕ್ಟ್‌ ಎಂಜಿನಿಯರ್‌ – I (Project Engineer-I) – 54 ಹುದ್ದೆಗಳಿವೆ. BEL Recruitment 2024 ಅಧಿಸೂಚನೆ ಪ್ರಕಾರ ದೇಶದ ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಬಿ.ಎಸ್‌ಸಿ, ಬಿ.ಇ ಅಥವಾ ಬಿ.ಟೆಕ್‌ ಪೂರೈಸಿದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಟ್ರೈನಿ ಎಂಜಿನಿಯರ್‌ – I ಹುದ್ದೆಗೆ ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 28 ವರ್ಷ ಮತ್ತು ಪ್ರಾಜೆಕ್ಟ್‌ ಎಂಜಿನಿಯರ್‌- I ಹುದ್ದೆಗೆ ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 32 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಲಭ್ಯ.

ಅರ್ಜಿ ಶುಲ್ಕ

ಎಸ್‌ಸಿ/ಎಸ್‌ಟಿ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಸುಲ್ಕ ಪಾವತಿಸಬೇಕಾಗಿಲ್ಲ. ಇನ್ನುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ಟ್ರೈನಿ ಎಂಜಿನಿಯರ್‌ – I ಹುದ್ದೆಗೆ 150 ರೂ. ಮತ್ತು ಪ್ರಾಜೆಕ್ಟ್‌ ಎಂಜಿನಿಯರ್‌- I ಹುದ್ದೆಗೆ 400 ರೂ. ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ ಟ್ರೈನಿ ಎಂಜಿನಿಯರ್‌ – I ಹುದ್ದೆಗೆ 30,000 ರೂ. – 40,000 ರೂ. ಮತ್ತು ಪ್ರಾಜೆಕ್ಟ್‌ ಎಂಜಿನಿಯರ್‌- I ಹುದ್ದೆಗೆ 40,000 ರೂ. – 55,000 ರೂ. ಮಾಸಿಕ ವೇತನ ದೊರೆಯಲಿದೆ.

BEL Recruitment 2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://bel.alobhatech.com/)
  • ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ ವಿಳಾಸ: https://bel-india.in/ಗೆ ಭೇಟಿ ನೀಡಿ.

ಈ ಸುದ್ದಿಯನ್ನೂ ಓದಿ: Job Guide: ಐಟಿಐ, ಡಿಪ್ಲೊಮಾ ವಿದ್ಯಾರ್ಹತೆ ಹೊಂದಿದವರಿಗೆ ಗುಡ್‌ನ್ಯೂಸ್‌; ಸೀಡ್ಸ್‌ ಕಾರ್ಪೋರೇಷನ್‌ನಲ್ಲಿದೆ 188 ಹುದ್ದೆ