ಬೆಂಗಳೂರು: ಒಂದೊಳ್ಳೆ ಉದ್ಯೋಗಕ್ಕಾಗಿ ಹುಟುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (Bharat Electronics Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BEL Recruitment 2024). ಎಂಜಿನಿಯರಿಂಗ್ ಅಸಿಸ್ಟಂಟ್ (ಟ್ರೈನಿ), ಟೆಕ್ನಿಷಿಯನ್ ಸೇರಿ ಒಟ್ಟು 84 ಹುದ್ದೆಗಳಿವೆ. 10ನೇ ತರಗತಿ, ಡಿಪ್ಲೊಮಾ, ಐಟಿಐ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಡಿ. 17 (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಎಂಜಿನಿಯರಿಂಗ್ ಅಸಿಸ್ಟಂಟ್ (ಟ್ರೈನಿ) – 47 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಎಂಜಿನಿಯರಿಂಗ್
ಟೆಕ್ನಿಷಿಯನ್ ಸಿ – 37 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ
ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ ಎಂದು ಅದಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಶುಲ್ಕ
ಎಸ್‌ಸಿ/ಎಸ್‌ಟಿ, ಮಾಜಿ ಸೈನಿಕರು ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಇನ್ನುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 295 ರೂ. ಅನ್ನು ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ ಎಂಜಿನಿಯರಿಂಗ್ ಅಸಿಸ್ಟಂಟ್ (ಟ್ರೈನಿ) ಹುದ್ದೆಗೆ 24,500 ರೂ. – 90,000 ರೂ. ಹಾಗೂ ಟೆಕ್ನಿಷಿಯನ್ ಸಿ ಹುದ್ದೆಗೆ 21,500 ರೂ. – 82,000 ರೂ. ಮಾಸಿಕ ವೇತನ ದೊರೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
BEL Recruitment 2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://jobapply.in/BEL2024BNGEATTECH/) - ಹೆಸರು ನೋಂದಾಯಿಸಿ.
- ಹೊಸ ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ.
- ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ಡಾಕ್ಯುಮೆಂಟ್ ಅಪ್‌ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಯಾವುದೇ ಅನುಮಾನ ಪರಿಹಾರಕ್ಕೆ, ಹೆಚ್ಚಿನ ಮಾಹಿತಿ ಅಧಿಕೃತ ವೆಬ್‌ಸೈಟ್ ವಿಳಾಸ: bel-india.inಗೆ ಭೇಟಿ ನೀಡಿ. ಜತೆಗೆ ಇಮೇಲ್ ವಿಳಾಸಕ್ಕೆ: belbgrec@bel.co.inಗೆ ಮೇಲ್ ಮಾಡಿ ಅಥವಾ ದೂರವಾಣಿ ಸಂಖ್ಯೆ: 080-22195369ಕ್ಕೆ ಕರೆ ಮಾಡಿ.
ಈ ಸುದ್ದಿಯನ್ನೂ ಓದಿ: BPNL Recruitment 2024: ಗಮನಿಸಿ; ಭಾರತೀಯ ಪಶುಪಾಲನಾ ನಿಗಮದ 2,248 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ