Sunday, 1st December 2024

ಪತ್ರಕರ್ತೆ ಆಯೂಬ್‌’ಗೆ ನಿರೀಕ್ಷಣಾ ಜಾಮೀನು ಮಂಜೂರು

ಲಕ್ನೋ: ಗಾಜಿಯಾಬಾದ್‌ನಲ್ಲಿ ಮುಸ್ಲಿಮ್‌ ಸಮುದಾಯದ ವ್ಯಕ್ತಿಯ ಗಡ್ಡವನ್ನು ಕೆಲವು ದಾಳಿಕೋರರು ಕತ್ತರಿಸಿದ್ದಾರೆ ಎಂಬ ಟ್ವೀಟ್‌ಗೆ ಸಂಬಂಧಿಸಿ, ಪತ್ರಕರ್ತೆ ರಾಣಾ ಆಯೂಬ್‌ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ಕುರಿತು ಸೋಮವಾರ ಬಾಂಬೆ ಹೈಕೋರ್ಟ್‌ನಾಲ್ಕು ವಾರಗಳ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಗಾಜಿಯಾಬಾದ್‌ನಲ್ಲಿ ವೃದ್ಧರೊಬ್ಬರ ಮೇಲೆ ಹಲ್ಲೆ ಆರೋಪದ ವಿಡಿಯೋ ಸೋಷಿ ಯಲ್ ಮೀಡಿಯಾದಲ್ಲಿ ವೈರಲ್‌ ಆದ ನಂತರ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದ ಟ್ವೀಟ್‌ಗಳಿಗೆ ಸಂಬಂಧಿಸಿ ಟ್ವಿಟ್ಟರ್‌, ಕಾಂಗ್ರೆಸ್ ಮುಖಂಡರು ಮತ್ತು ಪತ್ರಕರ್ತರ ವಿರುದ್ದ ದೂರು ದಾಖಲು ಮಾಡಿತ್ತು. ಲೋನಿ ಬಾರ್ಡರ್ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ದೂರು ನೀಡಿದ್ದರು. ಈ ನಿಟ್ಟಿನಲ್ಲಿ ರಾಣಾ ಆಯೂಬ್‌ ಟ್ರಾನ್ಸಿಟ್‌ ನಿರೀಕ್ಷಣಾ ಜಾಮೀನು ಕೋರಿದ್ದರು.

ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ ಡಿ ನಾಯ್ಕ್‌, ಅರ್ಜಿದಾರೆ ಯನ್ನು ಬಂಧಿಸಿದರೆ ರೂ. 25,000 ಬಾಂಡ್‌ ಹಾಗೂ ಒಬ್ಬರು ಅಥವಾ ಇಬ್ಬರ ಭದ್ರತೆ ಪಡೆದು ಬಿಡುಗಡೆ ಮಾಡಬೇಕು. ಈ ಜಾಮೀನು ನಾಲ್ಕು ವಾರಗಳ ಕಾಲ ಇರಲಿದೆ,” ಎಂದು ಆದೇಶದಲ್ಲಿ ತಿಳಿಸಿದೆ. ಎಫ್‌ಐಆರ್‌ನಲ್ಲಿ ಉಲ್ಲೇಖಿಸಿರುವ ಎಲ್ಲಾ ಅಪರಾಧಗಳಿಗೂ ಗರಿಷ್ಠ ಮೂರು ವರ್ಷ ಜೈಲು ಶಿಕ್ಷೆ ವಿಧಿಸಬಹುದಾಗಿದೆ.