Thursday, 19th September 2024

Junior NTR: ಆಂಧ್ರ, ತೆಲಂಗಾಣ ಪ್ರವಾಹ; 35 ಮಂದಿ ಬಲಿ-1ಕೋಟಿ ದೇಣಿಗೆ ಕೊಟ್ಟ ಜೂ.NTR

Junior NTR

ಹೈದರಾಬಾದ್‌: ತೆಲುಗು ರಾಜ್ಯಗಳಾದ ಆಂಧ್ರಪ್ರದೇಶ(Andhra Pradesh) ಮತ್ತು ತೆಲಂಗಾಣ(Telangana)ಗಳಲ್ಲಿ ಭಾರೀ ಮಳೆ(Heavy Rain)ಗೆ ಜನ ತತ್ತರಿಸಿ ಹೋಗಿದ್ದಾರೆ. ಮಳೆಯಿಂದಾಗಿ ಪ್ರವಾಹ ರಾಜ್ಯಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣಗೊಂಡಿದ್ದು, ಇದುವರೆಗೆ 30ಕ್ಕೂ ಅಧಿಕ ಮಂದಿ ಅಸುನೀಗಿದ್ದಾರೆ. ಸಾವಿರಾರು ಮಂದಿ ಮನೆ ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಆಂಧ್ರ ಸಿಎಂ ಚಂದ್ರಬಾಬು ನಾಯ್ಢು(Chandrababu Naidu) ಹಾಗೂ ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ(Revanth Reddy) ನೆರೆಪರಿಹಾರಕ್ಕೆ ಕೇಂದ್ರದ ಮೊರೆ ಹೋಗಿದ್ದಾರೆ.  ಮತೊಂದೆಡೆ ನೆರೆಪರಿಹಾರ ಕಾರ್ಯದಲ್ಲಿ ನೆರವಿಗೆ ಧಾವಿಸಿರುವ ತೆಲುಗು ನಟ ಜೂನಿಯರ್‌ ಎನ್‌ಟಿಆರ್‌(Junior NTR) ಎರಡೂ ರಾಜ್ಯಗಳಿಗೆ ಒಟ್ಟು 1ಕೋಟಿ ರೂ. ಹಣವನ್ನು ದೇಣಿಗೆ ನೀಡಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಜೂನಿಯರ್‌ ಎನ್‌ಟಿಆರ್‌, ತೆಲುಗು ಜನರು ಈ ವಿಪತ್ತಿನಿಂದ ಬೇಗ ಚೇತರಿಸಿಕೊಳ್ಳಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ನನ್ನ ಕಡೆಯಿಂದ ನಾನು ರೂ.ಗಳ ದೇಣಿಗೆಯನ್ನು ಘೋಷಿಸುತ್ತಿದ್ದೇನೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರಗಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಎರಡು ತೆಲುಗು ರಾಜ್ಯಗಳ ಸರ್ಕಾರಗಳು ಪ್ರವಾಹ ವಿಪತ್ತಿನಿಂದ ಪರಿಹಾರಕ್ಕಾಗಿ ಕೈಗೊಂಡ ಕ್ರಮಗಳಿಗೆ ಸಹಾಯ ಮಾಡಲು ತಲಾ 50 ಲಕ್ಷ ರೂ. ನೀಡುತ್ತಿದ್ದೇನೆ ಎಂದಿದ್ದಾರೆ.

ಭಾರೀ ಮಳೆಯಿಂದಾಗಿ ಆಂಧ್ರಪ್ರದೇಶದಲ್ಲಿ 17 ಜನರು ಮತ್ತು ತೆಲಂಗಾಣದಲ್ಲಿ 16 ಜನರು ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ನಡುವಿನ ಸಂಪರ್ಕ ರಸ್ತೆಗಳು ಹಾನಿಗೊಂಡಿವೆ. ಕಳೆದ ಮೂರು ದಿನಗಳಿಂದ ಎರಡೂ ರಾಜ್ಯಗಳಲ್ಲಿ ಸುರಿಯುತ್ತಿರುವ ಮಳೆಗೆ ಮನೆಗಳು, ಬೆಳೆಗಳು, ರಸ್ತೆಗಳು  ನಾಶವಾಗಿವೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಂಧ್ರಪ್ರದೇಶ ಸಿಎಂ ನಾಯ್ಡು, ನನ್ನ ವೃತ್ತಿ ಜೀವನದಲ್ಲಿ ಇದೊಂದು ದೊಡ್ಡ ವಿಪತ್ತು ಎಂದಿದ್ದಾರೆ.

ಮತ್ತೊಂದೆಡೆ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ, ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಅವರು ಪ್ರಾಥಮಿಕ ಅಂದಾಜಿನ ಪ್ರಕಾರ ಪ್ರವಾಹದಿಂದ ₹ 5,000 ಕೋಟಿಗಳಷ್ಟು ಆರ್ಥಿಕ ನಷ್ಟವಾಗಿದೆ ಎಂದಿದ್ದಾರೆ. ಎರಡೂ ರಾಜ್ಯಗಳಲ್ಲಿ ಇಂದು ಮಳೆ ಕಡಿಮೆಯಾಗಲಿದ್ದು, ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ಪ್ರಕಾಶಂ ಅನೆಕಟ್ಟು ದಾಖಲೆ ಪ್ರಮಾಣದ ನೀರಿನ ಮಟ್ಟವನ್ನು ದಾಖಲಿಸಿದೆ. 1.43 ಲಕ್ಷ ಕ್ಯೂಸೆಕ್‌ನ ನೀರನ್ನು ಬಿಡುಗಡೆ ಮಾಡಿದೆ. ಇನ್ನು ಇದರ ಸುತ್ತಮುತ್ತಲಿನ ಪ್ರದೇಶಗಳು ಪ್ರವಾಹದ ನೀರಿನಲ್ಲಿ ಮುಳುಗಿವೆ.

 ಸಿಎಂಗಳ ಜತೆ ಪ್ರಧಾನಿ ಮಾತುಕತೆ

ಪ್ರಧಾನಿ ನರೇಂದ್ರ ಮೋದಿ ಭಾನುವಾರ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಮತ್ತು ಅವರ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಅವರಿಗೆ ಭರವಸೆ ನೀಡಿದ್ದಾರೆ. ತೆಲಂಗಾಣ ಕಂದಾಯ ಸಚಿವ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮಾತನಾಡಿ, ಪ್ರತ್ಯೇಕ ಮಳೆ ಸಂಬಂಧಿತ ಘಟನೆಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಭಾರೀ ಮಳೆಯಿಂದಾಗಿ ನಗರದ ಹಲವೆಡೆ ಜಲಾವೃತವಾಗಿರುವ ಹೈದರಾಬಾದ್‌ನಲ್ಲಿ ಸೋಮವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

NTR ಟ್ವೀಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿhttps://x.com/tarak9999/status/1830825968820244827

Leave a Reply

Your email address will not be published. Required fields are marked *