Sunday, 15th December 2024

ಏಕೀಕೃತ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕೊಣಿಜೇಟಿ ರೋಸಯ್ಯ ನಿಧನ

K Rosaiah

ಹೈದರಾಬಾದ್(ತೆಲಂಗಾಣ): ತಮಿಳುನಾಡಿನ ಮಾಜಿ ರಾಜ್ಯಪಾಲ, ಏಕೀಕೃತ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕೊಣಿಜೇಟಿ ರೋಸಯ್ಯ (88 ವರ್ಷ) ಶನಿವಾರ ಅಲ್ಪಕಾಲದ ಅಸೌಖ್ಯದ ಬಳಿಕ ನಿಧನರಾಗಿದ್ದಾರೆ.

ಅನಾರೋಗ್ಯಕ್ಕೆ ತುತ್ತಾದ ರೋಸಯ್ಯ ಅವರನ್ನು ಖಾಸಗಿ ಆಸ್ಪತ್ರೆಗೆ ವರ್ಗಾಯಿಸ ಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.

ರೋಸಯ್ಯ ಅವರ ನಿಧನಕ್ಕೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಸಂತಾಪ ಸೂಚಿಸಿದ್ದಾರೆ. ರೋಸಯ್ಯ, ಅವರು ಕಾಂಗ್ರೆಸ್ ನ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದರು. ಅವರು ಆಂಧ್ರ ಪ್ರದೇಶದಲ್ಲಿ ಕೆ. ವಿಜಯ ಭಾಸ್ಕರ್ ರೆಡ್ಡಿ, ವೈ ಎಸ್ ರಾಜಶೇಖರ ರೆಡ್ಡಿ ಸೇರಿದಂತೆ ಹಲವರ ಸಂಪುಟದಲ್ಲಿ ಸೇವೆ ಸಲ್ಲಿಸಿದ್ದರು. ಹಣಕಾಸು ಸಚಿವರಾಗಿ ಸದನದಲ್ಲಿ ಬಜೆಟ್ ಮಂಡಿಸಿದ ದಾಖಲೆಯಿದೆ.

2009ರಲ್ಲಿ ವೈ ಎಸ್ ರಾಜಶೇಖರ ರೆಡ್ಡಿ ಅವರ ಹಠಾತ್ ನಿಧನ ನಂತರ ಹಣಕಾಸು ಸಚಿವರಾಗಿದ್ದ ರೋಸಯ್ಯ ಅವರು ಮುಖ್ಯಮಂತ್ರಿಯಾದರು.