Saturday, 7th September 2024

ಕಾಳಿ ದೇವಿ ಸಿಗರೇಟ್ ಸೇದುತ್ತಿರುವ ಪೋಸ್ಟರ್ ಪ್ರಕರಣ: ನಿರ್ದೇಶಕಿಗೆ ರಿಲೀಫ್

ಮುಂಬೈ: ಕಾಳಿ ದೇವಿ ಸಿಗರೇಟ್ ಸೇದುತ್ತಿರುವ ವಿವಾದಾತ್ಮಕ ಪೋಸ್ಟರ್ ಪ್ರಕರಣದಲ್ಲಿ ನಿರ್ದೇಶಕಿ ಲೀನಾ ಮಣಿಮೇಕಲೈ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ರಕ್ಷಣೆ ನೀಡಿದೆ.

ಕಾಳಿ ದೇವಿ ಸಿಗರೇಟ್ ಸೇದುತ್ತಿರುವುದನ್ನು ತೋರಿಸುವ ತಮ್ಮ ಮುಂಬರುವ ಸಾಕ್ಷ್ಯಚಿತ್ರದ ವಿವಾದಾತ್ಮಕ ಪೋಸ್ಟರ್‌ಗೆ ಸಂಬಂಧಿಸಿದಂತೆ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ ಗಳಿಗೆ ಸಂಬಂಧಿಸಿದಂತೆ ಲೀನಾ ಮಣಿಮೇಕಲೈ ಅವರ ಮೇಲೆ ಬಲವಂತದ ಕ್ರಮ ಕೈಗೊಳ್ಳದಂತೆ ಸರ್ವೋಚ್ಛ ನ್ಯಾಯಾಲಯ ಮಧ್ಯಂತರ ರಕ್ಷಣೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರನ್ನೊಳಗೊಂಡ ಪೀಠವು ಆಕೆಯ ಮನವಿ ಮೇರೆಗೆ ಕೇಂದ್ರ, ದೆಹಲಿ, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ಮಣಿಮೇಕಲೈ ಪರ ವಾದ ಮಂಡಿಸಿದ ವಕೀಲೆ ಕಾಮಿನಿ ಜೈಸ್ವಾಲ್, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶವಿಲ್ಲ ಎಂದಿದ್ದಾರೆ. ನಿರ್ದೇಶಕಿ ಲೀನಾ ವಿರುದ್ಧ ಲುಕೌಟ್ ಸುತ್ತೋಲೆ ಹೊರ ಡಿಸಿರುವುದನ್ನ ಸುಪ್ರೀಂ ಕೋರ್ಟ್ ಗಮನಿಸಿದೆ.

ಮಣಿಮೇಕಲೈ ಸಲ್ಲಿಸಿದ ಮನವಿಯಲ್ಲಿ ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಉತ್ತರಾಖಂಡದಲ್ಲಿ ತನ್ನ ವಿರುದ್ಧ ದಾಖಲಾದ ಎಫ್‌ಐಆರ್‌ ಗಳನ್ನು ರದ್ದುಗೊಳಿಸುವಂತೆ ಕೋರಿದ್ದರು. ವಿವಾದಿತ ಪೋಸ್ಟರ್‌ನಲ್ಲಿ ಮಣಿಮೇಕಲೈ ಸ್ವತಃ ಕಾಳಿ ದೇವಿಯ ವೇಷವನ್ನು ಧರಿಸಿ ಧ್ವಜವನ್ನು ಹಿಡಿದು ಕೊಂಡು ಸಿಗರೇಟ್ ಸೇದುತ್ತಿರುವುದನ್ನು ನೋಡಬಹು

error: Content is protected !!