ನಗರದ ಮೊದಲ ಮಹಿಳಾ ಬಸ್ ಚಾಲಕಿ ಶರ್ಮಿಳಾ ಅವರಿಗೆ ‘ಕಮಲ್ ಪನ್ಬಟ್ಟು ಮೈಯಂ’ (ಕಮಲ್ ಕಲ್ಚರಲ್ ಸೆಂಟರ್) ವತಿಯಿಂದ ಚಾಲಕ-ಉದ್ಯಮಿಯಾಗಲು ಅನುವು ಮಾಡಿಕೊಡಲು ಈ ಕಾರನ್ನು ನೀಡಲಾಗಿದೆ ಎಂದು ಮಕ್ಕಳ್ ನಿಧಿ ಮೈಯಂ ಮುಖ್ಯಸ್ಥರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಶರ್ಮಿಳಾ ಕೇವಲ ಚಾಲಕಿಯಾಗಿ ಉಳಿಯಬಾರದು. ಅನೇಕ ಶರ್ಮಿಳಾರನ್ನು ಸೃಷ್ಟಿಸ ಬೇಕೆಂಬುದು ನನ್ನ ನಂಬಿಕೆ’.
ಕಳೆದ ವಾರ, ಶರ್ಮಿಳಾ ಚಲಾಯಿಸುತ್ತಿದ್ದ ಬಸ್ನಲ್ಲಿ ಗಾಂಧಿಪುರಂನಿಂದ ಕೊಯಮತ್ತೂರಿನ ಪೀಲಮೇಡುವಿಗೆ ಕನಿಮೊಳಿ ಪ್ರಯಾಣಿಸಿದ್ದರು.
ಈ ವೇಳೆ ಅವರ ಬಳಿ ಟಿಕೆಟ್ ಇದ್ದರೂ ಡಿಎಂಕೆ ಸಂಸದರನ್ನು ಅವಮಾನಿಸಿದ ಹಿನ್ನೆಲೆಯಲ್ಲಿ ಕಂಡಕ್ಟರ್ ಜೊತೆಗೆ ವಾಗ್ವಾದ ನಡೆದಿತ್ತು. ಅಲ್ಲದೇ ಪ್ರಚಾರಕ್ಕಾಗಿ ಶರ್ಮಿಳಾ ಈ ರೀತಿ ಮಾಡಿದ್ದಾರೆ ಎಂಬ ಆರೋಪದ ನಂತರ ಚಾಲಕಿ ಹುದ್ದೆಗೆ ಅವರು ರಾಜೀನಾಮೆ ನೀಡಿದ್ದರು.