Sunday, 15th December 2024

ಕಾಂಚನಜುಂಗಾ ಎಕ್ಸ್ ಪ್ರೆಸ್ ರೈಲು ಅಪಘಾತ: ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ

ಪಶ್ಚಿಮ ಬಂಗಾಳ: ಕಾಂಚನಜುಂಗಾ ಎಕ್ಸ್ ಪ್ರೆಸ್ ರೈಲು ಅಪಘಾತದಲ್ಲಿ ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಕಾಂಚನಜುಂಗಾ ಎಕ್ಸ್ಪ್ರೆಸ್ ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದು ಹೇಳಿದರು. ‘ಪಶ್ಚಿಮ ಬಂಗಾಳದಲ್ಲಿ ನಡೆದ ರೈಲ್ವೆ ಅಪಘಾತ ದುಃಖಕರವಾಗಿದೆ.

ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದೇನೆ. ಸಂತ್ರಸ್ತರಿಗೆ ಸಹಾಯ ಮಾಡಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ರೈಲ್ವೆ ಸಚಿವ @AshwiniVaishnaw ಜಿ ಅವರು ಅಪಘಾತದ ಸ್ಥಳಕ್ಕೆ ತೆರಳುತ್ತಿದ್ದಾರೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.