ಮುಂಬೈ: ಚಿತ್ರ ಸಾಹಿತಿ ಜಾವೇದ್ ಅಖ್ತರ್ ಅವರು ತಮ್ಮ ವಿರುದ್ಧ ದಾಖಲಿಸಿರುವ ಮಾನಹಾನಿ ಪ್ರಕರಣ ವಜಾ ಮಾಡಲು ಬಾಂಬೆ ಹೈಕೋರ್ಟ್ ನಿರಾಕರಿ ಸಿದೆ.
ಚಿತ್ರ ಸಾಹಿತಿ ಜಾವೇದ್ ಅಖ್ತರ್ ದೂರು ಆಧರಿಸಿ ಮುಂಬೈನ ಅಂಧೇರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕ್ರಿಮಿನಲ್ ಮಾನಹಾನಿ ಪ್ರಕ್ರಿಯೆ ಆರಂಭಿಸಿದೆ. ತಮ್ಮ ವಿರುದ್ಧದ ಈ ಪ್ರಕ್ರಿಯೆ ವಜಾ ಮಾಡುವಂತೆ ಕೋರಿದ್ದರು. ಆದರೆ, ಕಂಗನಾ ಮನವಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ.
ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಖಾಸಗಿ ಚಾನೆಲ್‌ಗೆ ಜುಲೈ 19, 2020ರಂದು ನೀಡಿದ ಸಂದರ್ಶನದಲ್ಲಿ ಕಂಗನಾ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಜಾವೇದ್ ಅಖ್ತರ್ ಆರೋಪಿಸಿದ್ದು, ಈ ಕುರಿತಂತೆ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ದೂರು ದಾಖಲಿಸಿ ದ್ದರು.
ಇದಲ್ಲದೆ, ಸಿಆರ್‌ಪಿಸಿ ಸೆಕ್ಷನ್ 482 ಹಾಗೂ 204ರ ಅಡಿಯಲ್ಲಿ ಪೊಲೀಸ್ ತನಿಖೆ ನಡೆಸಲು ಮ್ಯಾಜಿಸ್ಟ್ರೇಟ್ ನೀಡಿರುವ ಆದೇಶ ಹಾಗೂ ಅದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆ ಮತ್ತು ವಿಚಾರಣೆಗೆ ಸಮನ್ಸ್ ಎಲ್ಲವನ್ನು ರದ್ದುಗೊಳಿಸುವಂತೆ ನಟಿ ಕಂಗನಾ ಕೋರಿದ್ದರು.
ಕಂಗನಾ ಅವರು ಪೊಲೀಸರು ನೀಡಿದ ಸಮನ್ಸ್ ಪ್ರಕಾರ ವಿಚಾರಣೆಗೆ ಹಾಜರಾಗಿಲ್ಲ, ಹೀಗಾಗಿ, ಪೊಲೀಸ್ ತನಿಖೆಯಲ್ಲಿ ಪಕ್ಷಪಾತ ಅಥವಾ ಸೂಕ್ತ ತನಿಖೆ ಯಾಗಿಲ್ಲ ಎಂದು ಪ್ರಶ್ನಿಸುವ ನೈತಿಕ ಅಧಿಕಾರ ಕಳೆದುಕೊಂಡಿ ದ್ದಾರೆ. ವಿಚಾರಣೆಯನ್ನು ವಿಳಂಬಗೊಳಿಸುವ ಏಕೈಕ ಉದ್ದೇಶದಿಂದ ಕಂಗನಾ ಈ ರೀತಿ ಮನವಿ ಮಾಡಿದ್ದಾರೆ ಎಂದು ವಾದಿಸಿದರು. ಈ ಮಾನನಷ್ಟ ಮೊಕದ್ದಮೆ ಅರ್ಜಿ ವಿಚಾರಣೆಗೆ ಫೆಬ್ರವರಿ 1ರಂದು ಹಾಜರಾಗುವಂತೆ ಕಂಗನಾಗೆ ಅಂಧೇರಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಸಮನ್ಸ್ ನೀಡಿತ್ತು.
ಆದರೆ, ಕಂಗನಾ ಕೋರ್ಟಿಗೆ ಹಾಜರಾಗಿರಲಿಲ್ಲ. ನ್ಯಾಯಾಲಯಕ್ಕೆ ಗೈರಾದ ಹಿನ್ನೆಲೆಯಲ್ಲಿ ಜಾಮೀನು ಸಹಿತ ವಾರೆಂಟ್ ಹೊರಡಿಸಿ ವಿಚಾರಣೆಯನ್ನು ಮಾರ್ಚ್ 26ಕ್ಕೆ ಮುಂದೂಡಲಾಗಿತ್ತು. ನಂತರ ಕಂಗನಾ ಅವರು ಮೇಲ್ಮನವಿ ಸಲ್ಲಿಸಿದ್ದರು.
ಕಂಗನಾ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಬೇಕು ಎಂದು ಅಖ್ತರ್ ಪರ ವಕೀಲೆ ವೃಂದಾ ಗ್ರೋವರ್ ಅವರು ವಾದಿಸಿದರು. ಆದರೆ, ಕಂಗನಾ ಪರ ವಕೀಲ ರಿಜ್ವಾನ್ ಸಿದ್ದಿಕಿ ಅವರು ಸಮನ್ಸ್ ಜಾರಿ ಮಾಡಿರುವುದೆ ಕಾನೂನು ರೀತಿ ಸಮರ್ಪಕವಾಗಿಲ್ಲ ಎಂದು ಪ್ರತಿ ವಾದ ಮಾಡಿದರು.