Saturday, 14th December 2024

‘ಸ್ವತಂತ್ರ ಭಾರತದ ಮೊದಲ ಪ್ರಧಾನಿ ನೇತಾಜಿ ಬೋಸ್’…ಕಂಗನಾ ರನೌತ್ ಟ್ರೋಲ್ ಗೆ ಗುರಿ

ಮುಂಬೈ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಎಂದು ಕರೆದ ಹಿಮಾಚಲದ ಮಂಡಿಯ ಬಿಜೆಪಿ ಲೋಕಸಭಾ ಅಭ್ಯರ್ಥಿ, ನಟಿ ಕಂಗನಾ ರನೌತ್ ಈಗ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಗೆ ಗುರಿಯಾಗಿದ್ದಾರೆ.

ನಿರೂಪಕಿ ನವಿಕಾ ಕುಮಾರ್ ಅವರು ಕಂಗನಾ ರನೌತ್ ಅವರನ್ನು ಸಂದರ್ಶಿಸಿದಾಗ ಅವರು ಈ ಹೇಳಿಕೆ ನೀಡಿದ್ದು, ಇದನ್ನು ಕಾಂಗ್ರೆಸ್ ನಾಯಕ ಬಿ.ವಿ. ಶ್ರೀನಿವಾಸ್, ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮತ್ತು ಇತರರು ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಕಂಗನಾ ಅವರು ಹೇಳಿದ ತಪ್ಪನ್ನು ನವಿಕಾ ಕುಮಾರ್ ಸರಿಪಡಿಸಲು ಪ್ರಯತ್ನಿಸಿದರು. ಆದರೆ ರನೌತ್ ತಾವು ಹೇಳಿದ್ದೇ ಸರಿ ಎಂಬಂತೆ ವಾದಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.