ರೈಲಿನಲ್ಲಿದ್ದ 2,348 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದ ವ್ಯಾಪ್ತಿಯಲ್ಲಿ ರೈಲು ಹಳಿ ತಪ್ಪಿದ್ದು, ಯಾವುದೇ ಅನಾಹುತ ವಾಗಿಲ್ಲ.
ರೈಲು ಹಳಿ ತಪ್ಪಿದ್ದರಿಂದ ಯಾವುದೇ ಅನಾಹುತವಾಗಿಲ್ಲ. ಎಲ್ಲಾ 2348 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಕಣ್ಣೂರು-ಯಶವಂತಪುರ ಎಕ್ಸ್ಪ್ರೆಸ್ ರೈಲು ಸಾಗುವಾಗ ಗುಡ್ಡ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ಕಲ್ಲುಗಳು ಹಳಿಗೆ ಸಿಲುಕಿದ್ದು, ರೈಲು ಹಳಿ ತಪ್ಪಿದೆ. ರೈಲಿನ 5 ಬೋಗಿ ಹಳಿ ತಪ್ಪಿದ್ದರಿಂದ ಈ ಮಾರ್ಗದಲ್ಲಿ ಸಾಗಬೇಕಾದ ಕೆಲವು ರೈಲುಗಳ ಮಾರ್ಗ ಬದಲಾಗಿದೆ.
ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದು, ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ರೈಲಿನಲ್ಲಿದ್ದ ಪ್ರಯಾಣಿಕರ ಸಂಚಾರಕ್ಕಾಗಿ ಬಸ್ಗಳ ವ್ಯವಸ್ಥೆಯನ್ನು ಇಲಾಖೆ ಮಾಡಿದೆ.