Thursday, 12th December 2024

ಬ್ರಿಜ್ ಭೂಷಣ್ ಶರಣ್ ಸಿಂಗ್ ಪುತ್ರನಿಗೆ ಬಿಜೆಪಿ ಟಿಕೆಟ್​​​

ನವದೆಹಲಿ: ಬ್ರಿಜ್​ ಭೂಷಣ್​ ಶರಣ್​ಸಿಂಗ್ ಪರವಾಗಿ ಅವರ ಮಗ ಕರಣ್ ಭೂಷಣ್ ಸಿಂಗ್ ಅವರಿಗೆ ಉತ್ತರಪ್ರದೇಶದ ಕೈಸರ್‌ಗಂಜ್‌ ಲೋಕಸಭಾ ಕ್ಷೇತ್ರದಿಂದ ಟಿಕೆಟ್​​​ ನೀಡಲಾಗಿದೆ.

ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್​ ಭೂಷಣ್​ ಶರಣ್​ಸಿಂಗ್​​​ಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್​ ಇಲ್ಲ ಎಂದು ಹೇಳಲಾಗಿತ್ತು. ಇದೀಗ ಅವರ ಮಗನಿಗೆ ಟಿಕೆಟ್​​​ ನೀಡಲಾಗಿತ್ತು. ಇನ್ನು ಉತ್ತರಪ್ರದೇಶದ ರಾಯ್ ಬರೇಲಿಯಿಂದ ಯೋಗಿ ದಿನೇಶ್ ಪ್ರತಾಪ್ ಸಿಂಗ್ ಅವರಿಗೆ ನೀಡಲಾಗಿದೆ.

ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್​ ಭೂಷಣ್​ ಶರಣ್​ಸಿಂಗ್ಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್​ ನೀಡಿಲ್ಲ, ಗೃಹ ಸಚಿವ ಅಮಿತ್​ ಶಾ ಲಕ್ನೋದಲ್ಲಿ ಈ ವಿಚಾರದ ಕುರಿತು ಚರ್ಚಿಸಲಿದ್ದು ಬ್ರಿಜ್​ ಭೂಷಣ್​ ಒಪ್ಪಿದರೆ ಅವರ ಕುಟುಂಬದಲ್ಲಿ ಯಾರಿಗಾದರೂ ಟಿಕೆಟ್ ನೀಡುವುದಾಗಿ ಚರ್ಚೆ ನಡೆದಿತ್ತು,

ಭಾರೀ ಚರ್ಚೆಯಲ್ಲಿರುವ ರಾಯ್ ಬರೇಲಿ ಲೋಕಸಭೆ ಕ್ಷೇತ್ರಕ್ಕೂ ಈ ಅಭ್ಯರ್ಥಿಯನ್ನು ಬಿಜೆಪಿ ಘೋಷಣೆ ಮಾಡಿದೆ.

ಕರಣ್ ಭೂಷಣ್ ಸಿಂಗ್ ಪ್ರಸ್ತುತ ಉತ್ತರ ಪ್ರದೇಶದ ಕುಸ್ತಿ ಸಂಘದ ಅಧ್ಯಕ್ಷರಾಗಿದ್ದಾರೆ. ಜತೆಗೆ ಗೊಂಡಾದ ನವಾಬ್‌ಗಂಜ್‌ನಲ್ಲಿರುವ ಸಹಕಾರಿ ಗ್ರಾಮಾಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷರೂ ಆಗಿದ್ದಾರೆ.

ಯೋಗಿ ಸರ್ಕಾರದ ಸಚಿವ ದಿನೇಶ್ ಪ್ರತಾಪ್ ಸಿಂಗ್ ಈ ಬಾರಿ ಬಿಜೆಪಿಯಿಂದ ರಾಯ್ ಬರೇಲಿಯಲ್ಲಿ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್​​​ನ ಭದ್ರಕೋಟೆಯಲ್ಲಿ ಈ ಬಾರಿ ಬಿಜೆಪಿ ತನ್ನ ಶಕ್ತಿಪ್ರದರ್ಶನ ಮಾಡಲಿದೆ. ಮೇ 3 ರಂದು ರಾಯ್‌ಬರೇಲಿಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.