Thursday, 26th December 2024

Karnataka Bank Recruitment 2024: ಕರ್ಣಾಟಕ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ

Karnataka Bank Recruitment 2024

ಬೆಂಗಳೂರು: ಬ್ಯಾಂಕ್‌ನಲ್ಲಿ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ದೇಶದ ಪ್ರತಿಷ್ಠಿತ ಕರ್ಣಾಟಕ ಬ್ಯಾಂಕ್‌ (Karnataka Bank) ದೇಶಾದ್ಯಂತ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Karnataka Bank Recruitment 2024). ಪ್ರೊಬೆಷನರಿ ಆಫೀಸರ್‌ (ಸ್ಕೇಲ್‌-I) ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನಾಳೆ(ಡಿ. 10)ಯೇ ಕೊನೆಯ ದಿನ (Job Guide).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಪ್ರೊಬೆಷನರಿ ಆಫೀಸರ್‌ ಹುದ್ದೆ ಇದಾಗಿದ್ದು, 3 ವರ್ಷಗಳ ಅವಧಿಗೆ ನೇಮಕ ಮಾಡಲಾಗುತ್ತದೆ. ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ, ಅಗ್ರಿಕಲ್ಚರಲ್‌ ಸೈನ್ಸ್‌ನಲ್ಲಿ ಪದವಿ, ಕಾನೂನು ಪದವಿ, ಸಿಎ, ಸಿಎಸ್‌, ಸಿಎಂಎ, ಐಸಿಡಬ್ಲ್ಯುಎ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹರು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಅರ್ಜಿ ಶುಲ್ಕವಾಗಿ ಸಾಮಾನ್ಯ, ಒಬಿಸಿ, ಯುಆರ್‌ ಮತ್ತು ಇತರ ಅಭ್ಯರ್ಥಿಗಳು 800 ರೂ. ಪ್ಲಸ್‌ ತೆರಿಗೆ ಮತ್ತು ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು 700 ರೂ. ಪ್ಲಸ್‌ ತೆರಿಗೆ ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್‌.

ಆಯ್ಕೆ ವಿಧಾನ

ಆನ್‌ಲೈನ್‌ ಟೆಸ್ಟ್‌ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಪ್ರಶ್ನೆಗಳು ಇಂಗ್ಲಿಷ್‌ನಲ್ಲಿರುತ್ತದೆ. ಪರೀಕ್ಷೆ ರಾಜ್ಯದ ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ/ಧಾರವಾಡ, ಶಿವಮೊಗ್ಗ, ಕಲಬುರ್ಗಿ ಮತ್ತು ಹೈದರಾಬಾದ್‌, ಚೆನ್ನೈ, ಕೋಲ್ಕತಾ, ಮುಂಬೈ, ಪುಣೆ ಹಾಗೂ ಹೊಸದಿಲ್ಲಿಯಲ್ಲಿ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿರುವ ಬ್ಯಾಂಕ್‌ ಹೆಡ್‌ ಆಫೀಸ್‌ನಲ್ಲಿ ತರಬೇತಿ ನೀಡಲಾಗುತ್ತದೆ. ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದವರನ್ನು ಭಾರತಾದ್ಯಂತ ಇರುವ ಬ್ಯಾಂಕ್‌ನ ಶಾಖೆಗೆ ನೇಮಿಸಲಾಗುತ್ತದೆ. ಪರೀಕ್ಷೆ ಡಿ. 22ರಂದು ನಡೆಯುವ ಸಾಧ್ಯತೆ ಇದೆ ಎಂದು ಪ್ರಕಟಣೆ ತಿಳಿಸಿದೆ.

Karnataka Bank Recruitment 2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
    (https://karnatakabankpo.azurewebsites.net/)
  • ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಸುಲ್ಕ ಪಾವತಿಸಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ: karnatakabank.comಕ್ಕೆ ಭೇಟಿ ನೀಡಿ ಅಥವಾ 9513778742 ಅಥವಾ 0824-2228339/564/783 ನಂಬರ್‌ಗೆ ಕರೆ ಮಾಡಿ.

ಈ ಸುದ್ದಿಯನ್ನೂ ಓದಿ: Job Guide: ಪದವೀಧರರಿಗೆ ಗುಡ್‌ನ್ಯೂಸ್‌; ಜನರಲ್‌ ಇನ್ಶೂರೆನ್ಸ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾದಲ್ಲಿದೆ 110 ಹುದ್ದೆ; ಹೀಗೆ ಅಪ್ಲೈ ಮಾಡಿ