ನವದೆಹಲಿ: ಉಕ್ರೇನ್ ನ ಖಾರ್ಕೀವ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕ ಮೂಲಕ ವಿದ್ಯಾರ್ಥಿ ಯೊಬ್ಬ, ರಷ್ಯಾ ಸೈನಿಕರ ಗುಂಡೇಟಿಗೆ ಬಲಿ ಯಾಗಿದ್ದಾರೆ ಎಂದು ವರದಿಯಾಗಿದೆ.
ಕರ್ನಾಟಕದ ಹಾವೇರಿ ಮೂಲಕ ವಿದ್ಯಾರ್ಥಿ ನವೀನ್ ಉಕ್ರೇನ್ ನ ಖಾರ್ಕೀವ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಖಾರ್ಕೀವ್ ನಲ್ಲಿ ಐವರು ಸ್ನೇಹಿತರೊಂದಿಗೆ ಇದ್ದರು. ಬೆಳಿಗ್ಗೆ ತಿಂಡಿ ತರಲು ಹೊರಗೆ ಹೋದ ಬಳಿಕ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಇದೀಗ ರಷ್ಯಾ ಸೈನಿಕರ ಗುಂಡಿನ ದಾಳಿಗೆ ಉಕ್ರೇನ್ ಯುದ್ಧಭೂಮಿಯಲ್ಲಿ ಬಲಿಯಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಉಕ್ರೇನ್ ನ ಖಾರ್ಕಿವ್ ನಲ್ಲಿ ಬೆಳಿಗ್ಗೆ ನಡೆದ ಶೆಲ್ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾ ಲಯ ತಿಳಿಸಿದೆ. ಸಚಿವಾಲಯವು ವಿದ್ಯಾರ್ಥಿಯ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ ಎಂದು ಹೇಳಲಾಗಿದೆ.
ಖಾರ್ಕಿವ್ ನಲ್ಲಿ ನಡೆದ ಶೆಲ್ ದಾಳಿಯಿಂದ ಭಾರತೀಯ ವಿದ್ಯಾರ್ಥಿಯೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ ಎಂದು ನಾವು ತೀವ್ರ ದುಃಖದಿಂದ ದೃಢೀ ಕರಿಸುತ್ತೇವೆ. ಸಚಿವಾಲಯವು ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ ಎಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಇಲಾಖೆ ಹೇಳಿದೆ.