ನವದೆಹಲಿ: ಪ್ರತಿಭಟನೆ ನಡೆಸಲು ದೆಹಲಿಗೆ ಹೊರಟಿದ್ದ ಕರ್ನಾಟಕದ ರೈತರನ್ನು ಮಧ್ಯಪ್ರದೇಶದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಧ್ಯಪ್ರದೇಶದ ಭೋಪಾಲ್ ರೈಲು ನಿಲ್ದಾಣದಲ್ಲಿ ರೈತರನ್ನು ಮಧ್ಯಪ್ರದೇಶ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಹೊರಟ ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಫೆ.13 ರಂದು ದೆಹಲಿಯಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಲಿದ್ದು, ನಿಗದಿಯಾಗಿರುವ ರೈತರ ಮೆರವಣಿಗೆಯ ನಿರೀಕ್ಷೆಯಲ್ಲಿ, ದೆಹಲಿ ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯ ದಂತೆ ಈಶಾನ್ಯ ದೆಹಲಿ ಮತ್ತು ಉತ್ತರ ಪ್ರದೇಶದ ಗಡಿಗಳಲ್ಲಿ ಕ್ರಿಮಿನಲ್ ಪ್ರೊಸೀಜರ್ ಕೋಡ್ ಸೆಕ್ಷನ್ 144 ಅನ್ನು ವಿಧಿಸಲಾಗಿದೆ.