Saturday, 23rd November 2024

ನಾಳೆ ವಾರಣಾಸಿಯಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆ

Kashi Vishwanath Corridor

ವಾರಣಾಸಿ: ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಡಿ.13ರಂದು ಉದ್ಘಾಟಿಸಲಿದ್ದಾರೆ. ಇಡೀ ಕಾರ್ಯಕ್ರಮದಲ್ಲಿ ದೇಶಾದ್ಯಂತ 2000ಕ್ಕೂ ಹೆಚ್ಚು ಸಂತರು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಭಾಗ ವಹಿಸಲಿದ್ದಾರೆ.

800 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಶಿ ವಿಶ್ವನಾಥ ಧಾಮ ಯೋಜನೆ ಪೂರ್ಣಗೊಂಡಿದೆ. ಈ ಯೋಜನೆ ಭಕ್ತಾದಿಗಳ ಪ್ರಯಾಣದ ಅವಧಿಯನ್ನು ಕಡಿಮೆ ಮಾಡುವುದಲ್ಲದೇ, ದೇವಾಲಯ ಮತ್ತು ಗಂಗಾ ನದಿಯ ನಡುವೆ ನೇರ ಸಂಪರ್ಕ ಸ್ಥಾಪಿಸುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ 2 ದಿನಗಳ ಕಾಲ ವಾರಾಣಸಿಯಲ್ಲಿಯೇ ಇರಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು.

ಸೋಮವಾರ ಬಾಬಾನ ದರ್ಶನದ ನಂತರ ಕಾಶಿ ವಿಶ್ವನಾಥ್ ಕಾರಿಡಾರ್ ಅನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ನಂತರ ಬರೇಕಾ ಅತಿಥಿ ಗೃಹ ತಲುಪ ಲಿದ್ದಾರೆ. ಸಂಜೆ ರೋರೋ ಬೋಟ್ ಮೂಲಕ ಗಂಗಾ ಆರತಿಗೆ ತೆರಳಲಿದ್ದು ಆರತಿಯಲ್ಲಿ ಎಲ್ಲ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಡಿ.14ರಂದು ಕಾಶಿ ವಾರಣಾಸಿ ಮಹಾನಗರ ಮತ್ತು ಬಿಜೆಪಿ ಸಂಘಟನೆಯ ಜಿಲ್ಲಾ ಪದಾಧಿಕಾರಿಗಳೊಂದಿಗೆ ಔಪಚಾರಿಕ ಸಭೆ ನಡೆಸಲಿದ್ದಾರೆ. ಬರೇಕಾ ಆಡಳಿತ ಭವನದಲ್ಲಿ ಮುಖ್ಯಮಂತ್ರಿಗಳೊಂದಿಗೆ ಸಮಾವೇಶ ನಡೆಯಲಿದೆ. ಇದರಲ್ಲಿ ಎಲ್ಲಾ ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳ ಕಾಮಗಾರಿ ಮತ್ತು ಯೋಜನೆಗಳ ಪ್ರಸ್ತುತಿ ನೀಡಲಿದ್ದಾರೆ.