Saturday, 14th December 2024

ಕಾಶ್ಮೀರಿ ಪಂಡಿತರ ಗುಂಡಿಕ್ಕಿ ಹತ್ಯೆ

ಶೋಪಿಯಾನ್: ಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತರೊಬ್ಬರನ್ನು ಉಗ್ರರು ಶನಿವಾರ ಗುಂಡಿಕ್ಕಿ ಕೊಂದಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಚೌಧರಿ ಗುಂಡ್ ಪ್ರದೇಶದ ಅವರ ನಿವಾಸದ ಬಳಿ ಪುರನ್ ಕ್ರಿಶನ್ ಎಂಬುವವರ ಮೇಲೆ ದಾಳಿ ನಡೆಸ ಲಾಯಿತು. ಕೂಡಲೇ ಅವರನ್ನು ಶೋಪಿಯಾನ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆ ವೇಳೆಗಾಗಲೇ ಮೃತಪಟ್ಟಿರುವು ದಾಗಿ ವೈದ್ಯರು ಘೋಷಿಸಿದ್ದಾರೆ.
ಸದ್ಯ ಆ ಪ್ರದೇಶವನ್ನು ಸುತ್ತುವರಿಯಲಾಗಿದ್ದು, ದಾಳಿಕೋರರನ್ನು ಹಿಡಿಯಲು ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.