Friday, 13th December 2024

ಬಿಆರ್’ಎಸ್ ಪಕ್ಷಕ್ಕೆ ತೀವ್ರ ಮುಖಭಂಗ: ಕೆ.ಚಂದ್ರಶೇಖರ್ ರಾವ್ ರಾಜೀನಾಮೆ

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್ ಎಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದ್ದು, ಹೀನಾಯವಾಗಿ ಸೋಲನುಭವಿಸಿದೆ. ಕಾಂಗ್ರೆಸ್ ಹತ್ತು ವರ್ಷಗಳ ಬಳಿಕ ಜಯಭೇರಿ ಭಾರಿಸಿದೆ.

ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ 64 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ಬಿಆರ್ ಎಸ್ 38 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು ಖಚಿತ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಕೆ.ಚಂದ್ರಶೇಖರ್ ರಾವ್ ರಾಜೀನಾಮೆ ನೀಡಿದ್ದಾರೆ. ಸ್ವಂತ ಕಾರಿನಲ್ಲಿ ಹೈದರಾಬಾದ್ ನ ರಾಜಭವನಕ್ಕೆ ಆಗಮಿಸಿದ ಕೆ.ಚಂದ್ರಶೇಖರ್ ರಾವ್, ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.