Friday, 13th December 2024

ಕೇಜ್ರಿವಾಲ್ ನ್ಯಾಯಾಂಗ ಬಂಧನ ಆ.27 ರವರೆಗೆ ವಿಸ್ತರಣೆ

ವದೆಹಲಿ: ಕೇಂದ್ರ ತನಿಖಾ ದಳ ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಮಂಗಳವಾರ ಆಗಸ್ಟ್ 27 ರವರೆಗೆ ವಿಸ್ತರಿಸಿದೆ.

ಅಬಕಾರಿ ನೀತಿ ಹಗರಣದಲ್ಲಿ ಸಿಬಿಐ ತನ್ನ ಬಂಧನ ಎತ್ತಿಹಿಡಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮತ್ತು ಜಾಮೀನು ಕೋರಿ ದೆಹಲಿ ಮುಖ್ಯ ಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಬುಧವಾರ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ನ್ಯಾಯಪೀಠವು ಆ.23ರೊಳಗೆ ಸಿಬಿಐನಿಂದ ಪ್ರತಿಕ್ರಿಯೆ ಕೋರಿದೆ ಮತ್ತು ಅವರಿಗೆ ಮಧ್ಯಂತರ ಜಾಮೀನು ನಿರಾಕರಿಸಿದೆ.