Saturday, 14th December 2024

ಕೇಜ್ರಿವಾಲ್ ಜಾಮೀನು ಅರ್ಜಿಯ ವಿಚಾರಣೆ ಜೂ.19 ಕ್ಕೆ ಮುಂದೂಡಿಕೆ

ವದೆಹಲಿ: ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಜೂ.19 ಕ್ಕೆ ಮುಂದೂಡಿದೆ.

ಸಿಎಂ ಅವರ ಆರೋಗ್ಯ ಸ್ಥಿತಿ ಮತ್ತು ಹೆಚ್ಚಿನ ಚಿಕಿತ್ಸೆಯನ್ನು ನಿರ್ಧರಿಸಲು ರಚಿಸಲಾದ ವೈದ್ಯಕೀಯ ಮಂಡಳಿಯ ಕಾರ್ಯವಿಧಾನಗಳಿಗಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸೇರಲು ಅವಕಾಶ ನೀಡುವಂತೆ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಾಧೀಶರು ಶನಿವಾರಕ್ಕೆ ನಿಗದಿಪಡಿಸಿ ದ್ದಾರೆ.

ಈ ವಿಷಯದಲ್ಲಿ ಉತ್ತರವನ್ನು ಸಲ್ಲಿಸುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ವರದಿ ತಿಳಿಸಿದೆ.