Saturday, 14th December 2024

ಕೇಜ್ರಿವಾಲ್‌ಗೆ ಜಾಮೀನು ಆದೇಶಕ್ಕೆ ದೆಹಲಿ ಹೈಕೋರ್ಟ್‌’ನಿಂದ ತಡೆಯಾಜ್ಞೆ

ವದೆಹಲಿ: ಅಬಕಾರಿ ನೀತಿ ಜಾರಿ ವೇಳೆ ಹಗರಣ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾಮೀನು ಮಂಜೂರು ಮಾಡಿದ್ದ ರೋಸ್‌ ಅವೆನ್ಯೂ ಕೋರ್ಟ್‌ ಆದೇಶಕ್ಕೆ ದೆಹಲಿ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

‘ಜಾಮೀನಿಗೆ ಸಂಬಂಧಿಸಿದ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ. ಇನ್ನೂ 2-3 ದಿನಗಳ ಬಳಿಕ ಆದೇಶ ಹೊರಡಿಸಲಾಗುವುದು’ ಎಂಬುದಾಗಿ ಕೋರ್ಟ್‌ ತಿಳಿಸಿದೆ.

ರೋಸ್‌ ಅವೆನ್ಯೂ ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಇ.ಡಿ ಅಧಿಕಾರಿಗಳು ಹೈಕೋರ್ಟ್‌ ಮೊರೆ ಹೋಗಿದ್ದರು. ವಿಚಾರಣೆ ನಡೆಸುವವರೆಗೂ ಬಿಡುಗಡೆ ಮಾಡಬಾರದು ಎಂಬುದಾಗಿ ದೆಹಲಿ ಕೋರ್ಟ್‌ ಶುಕ್ರವಾರ ಬೆಳಗ್ಗೆ ಆದೇಶ ಹೊರಡಿಸಿತು.

ಬಳಿಕ ನ್ಯಾಯಾಲಯವು ಇ.ಡಿ ಅರ್ಜಿಯನ್ನು ವಿಚಾರಣೆ ನಡೆಸಿತು. ರೋಸ್‌ ಅವೆನ್ಯೂ ನ್ಯಾಯಾಲಯದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದ ನ್ಯಾಯಾಲಯವು, ಆದೇಶವನ್ನು ಮೀಸಲಿರಿಸಿತು.