ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಲು ಒಂದು ವರ್ಷ ಕಾಯುವುದು ಮೂಲಭೂತ ಹಕ್ಕಿನ ಉಲ್ಲಂಘನೆ ಯಾಗಿದೆ ಎಂದು ನ್ಯಾಯಾಲಯ ಹೇಳುತ್ತದೆ.
ವಿಚ್ಛೇದನಕ್ಕೆ ಈ ನಿಗದಿತ ಅವಧಿಗಾಗಿ ಕಾಯುವುದು ನಾಗರಿಕರ ಸ್ವಾತಂತ್ರ್ಯದ ಹಕ್ಕಿನ ಮೇಲೆ ಪರಿಣಾಮ ಬೀರುತ್ತದೆ ಎಂದು ನ್ಯಾಯಮೂರ್ತಿ ಎ.ಮುಹಮ್ಮದ್ ಮುಸ್ತಾಕಿ ಮತ್ತು ನ್ಯಾಯಮೂರ್ತಿ ಶೋಭಾ ಅನ್ನಮ್ಮ ಅವರ ಪೀಠ ಹೇಳಿದೆ. ವೈವಾಹಿಕ ವಿವಾದಗಳಲ್ಲಿ ಪತಿ ಮತ್ತು ಪತ್ನಿಯ ಸಾಮಾನ್ಯ ಯೋಗಕ್ಷೇಮವನ್ನು ಉತ್ತೇಜಿಸಲು ಭಾರತದಲ್ಲಿ ಏಕರೂಪ ವಿವಾಹ ಸಂಹಿತೆ ಯನ್ನು ಗಂಭೀರವಾಗಿ ಪರಿಗಣಿಸುವಂತೆ ಕೇರಳ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.