Saturday, 14th December 2024

ಕೇರಳ ಮಹಿಳಾ ಆಯೋಗದ ಅಧ್ಯಕ್ಷೆ ಜೋಸೆಫೀನ್‌ ರಾಜೀನಾಮೆ

ತಿರುವನಂತಪುರ: ದೂರುದಾರರ ವಿಚಾರದಲ್ಲಿ ಬೇಜವಾಬ್ದಾರಿತನ ತೋರಿದ ಕಾರಣಕ್ಕೆ ತೀವ್ರ ಟೀಕೆಗಳು ಎದುರಿಸಿದ ಕೇರಳ ಮಹಿಳಾ ಆಯೋಗದ ಅಧ್ಯಕ್ಷೆ ಎಂ.ಸಿ. ಜೋಸೆಫೀನ್‌ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಬುಧವಾರ ಕೌಟುಂಬಿಕ ಹಿಂಸಾಚಾರದ ವಿರುದ್ಧ ದೂರು ನೀಡಿದ್ದ ಮಹಿಳೆಯೊಂದಿಗೆ ಸಿಪಿಎಂ ಪಕ್ಷದ ಕೇಂದ್ರ ಸಮಿತಿ ಸದಸ್ಯರೂ ಆದ ಜೋಸೆಫೀನ್ ಕಠಿಣವಾಗಿ ಮಾತನಾಡಿದ್ದರು ಎಂಬ ಟೀಕಿಗಳು ಕೇಳಿಬಂದಿದ್ವವು.

ಸಿಪಿಎಂ ರಾಜ್ಯ ಕಾರ್ಯಕಾರಿ ಸಭೆಯಲ್ಲಿ ಜೋಸೆಫೀನ್ ಅವರು ಘಟನೆಗೆ ಸಂಬಂಧಿಸಿದಂತೆ ವಿವರಣೆ ನೀಡಿದ್ದು, ತಕ್ಷಣ ರಾಜೀನಾಮೆ ನೀಡುವಂತೆ ಪಕ್ಷದ ನಾಯಕರು ಸೂಚನೆ ನೀಡಿದ್ದರು. ಶೀಘ್ರದಲ್ಲೇ ರಾಜೀನಾಮೆ ಪತ್ರವನ್ನು ಮುಖ್ಯ ಕಾರ್ಯದರ್ಶಿಗೆ ನೀಡಲಿದ್ದಾರೆ’ ಎಂದು ಪಕ್ಷದ ಮೂಲಗಳು ತಿಳಿಸಿವೆ.

ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಜೋಸೆಫೀನ್ ಅವರ ನಡವಳಿಕೆ ಖಂಡಿಸಿ, ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದವು.