Saturday, 7th September 2024

ಡೌರಿ ಆಸೆಗೆ ವೈದ್ಯೆ ಆತ್ಮಹತ್ಯೆ

ತಿರುವನಂತಪುರಂ: ವಿದ್ಯಾವಂತನೊಬ್ಬನ ಕುಟುಂಬದವರ ಡೌರಿ ಆಸೆಗೆ ವೈದ್ಯೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೇರಳದ ತಿರುವನಂತಪುರಂನಲ್ಲಿ ವೈದ್ಯೆ ಡಾ.ಶಹಾನಾ ಆತ್ಮಹತ್ಯೆಗೆ ಶರಣಾಗಿದ್ದು, ವರದಕ್ಷಿಣೆ ಬೇಡಿಕೆಗಳನ್ನು ತನ್ನ ಕುಟುಂಬವು ಪೂರೈಸಲು ಸಾಧ್ಯವಾಗಲಿಲ್ಲ ಎಂಬ ಕಾರಣಕ್ಕೆ ಆಕೆಯ ಪ್ರಿಯಕರ ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಸ್ನಾತಕೋತ್ತರ ಕೋರ್ಸ್ ವ್ಯಾಸಂಗ ಮಾಡುತ್ತಿದ್ದ ಡಾ.ಶಹಾನಾ ಸಾವಿನ ಕುರಿತು ತನಿಖೆಗೆ ಆದೇಶಿಸಿದ್ದಾರೆ.

ಆತ್ಮಹತ್ಯೆಗೆ ಪ್ರಚೋದನೆ ಹಾಗೂ ವರದಕ್ಷಿಣೆ ತಡೆ ಕಾಯ್ದೆಯಡಿ ಪೊಲೀಸರು ಪ್ರಿಯಕರನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಡಾ.ಶಹಾನಾ ತನ್ನ ತಾಯಿ ಮತ್ತು ಇಬ್ಬರು ಒಡಹುಟ್ಟಿದವರ ಜೊತೆ ವಾಸಿಸುತ್ತಿದ್ದರು. ಗಲ್ಫ್ ನಲ್ಲಿ ಕೆಲಸ ಮಾಡುತ್ತಿದ್ದ ಆಕೆಯ ತಂದೆ ಎರಡು ವರ್ಷಗಳ ಹಿಂದೆ ನಿಧನರಾದರು. ಅವರು ಡಾ.ರುವಾಯಿಸ್ ಅವರೊಂದಿಗೆ ಸ್ನೇಹ ಹೊಂದಿದ್ದರು ಮತ್ತು ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು.

ಡಾ.ರುವಾಯಿಸ್ ಅವರ ಕುಟುಂಬ ವರದಕ್ಷಿಣೆಯಾಗಿ 150 ಗ್ರಾಂ ಚಿನ್ನಾಭರಣ, 15 ಎಕರೆ ಜಮೀನು ಮತ್ತು ಬಿಎಂಡಬ್ಲ್ಯು ಕಾರಿಗೆ ಬೇಡಿಕೆ ಇಟ್ಟಿದೆ ಎಂದು ಡಾ.ಶಹಾನಾ ಕುಟುಂಬ ಆರೋಪಿಸಿದೆ. ಶಹಾನಾ ಅವರ ಕುಟುಂಬವು ಬೇಡಿಕೆಯನ್ನು ಪೂರೈಸಲು ಸಾಧ್ಯವಿಲ್ಲ ಎಂದು ಹೇಳಿದಾಗ, ಆಕೆಯ ಗೆಳೆಯನ ಕುಟುಂಬವು ಮದುವೆಯನ್ನು ರದ್ದುಗೊಳಿಸಿತು ಎಂದು ತಿಳಿದುಬಂದಿದೆ.

ಇದರಿಂದ ಮನನೊಂದ ಯುವ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಆಕೆಯ ಅಪಾರ್ಟ್‍ಮೆಂಟ್‍ನಲ್ಲಿ ಸಿಕ್ಕ ಸೂಸೈಡ್ ನೋಟ್‍ನಲ್ಲಿ ಎಲ್ಲರಿಗೂ ಹಣ ಮಾತ್ರ ಬೇಕು ಎಂದು ಬರೆಯಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!