Saturday, 23rd November 2024

45 ಕೋಟಿ ರೂಪಾಯಿ ಗೆದ್ದ ಕೇರಳದ ನರ್ಸ್

ತಿರುವನಂತಪುರಂ: ಅಬುಧಾಬಿಯಲ್ಲಿ ನೆಲೆಸಿರುವ ಕೇರಳದ ನರ್ಸ್​​ವೊಬ್ಬರು ಅಬುಧಾಬಿಯ ಬಿಗ್ ಟಿಕೆಟ್ ಡ್ರಾದಲ್ಲಿ 20 ಮಿಲಿಯನ್ ಯುಎಇ ದಿರ್ಹಮ್ ಎಂದರೆ ಸುಮಾರು 45 ಕೋಟಿ ರೂಪಾಯಿ ಗೆದ್ದಿದ್ದಾರೆ.

ಅಬುಧಾಬಿಯಲ್ಲಿ ಕಳೆದ 21 ವರ್ಷಗಳಿಂದ ನರ್ಸ್​ ಆಗಿ ಕೆಲಸ ಮಾಡುತ್ತಿರುವ ಲವ್ಲ್ಮೋಲ್ ಅಚಾಮಾ ತನ್ನ ಕುಟುಂಬದೊಂದಿಗೆ ನೆಲೆಸಿದ್ದಾರೆ. ತನ್ನ ಪತಿ ಪ್ರತಿ ತಿಂಗಳು ಅಬುಧಾಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ಬಿಗ್ ಟಿಕೆಟ್ ತೆಗೆದುಕೊಳ್ಳುತ್ತಿದ್ದರು ಎಂದು ತಿಳಿಸಿದ್ದಾರೆ. ಈ ಬಹುಮಾನದ ಮೊತ್ತದ ಕುಟುಂಬದೊಂದಿಗೆ ಹಂಚಿಕೊಳ್ಳುವುದಾಗಿ ಹೇಳಿರುವ ಅವರು, ಬಾಕಿ ಹಣವನ್ನು ತನ್ನ ಮಕ್ಕಳ ಶಿಕ್ಷಣಕ್ಕೆ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

ಇತರ ಡ್ರಾಗಳಲ್ಲಿ ನಾಲ್ವರು ಕೇರಳಿಗರು ಬಂಪರ್​ ಬಹುಮಾನ ಗೆದ್ದಿದ್ದಾರೆ. ಯುಎಇಯ ರಾಜಧಾನಿ ಅಬುಧಾಬಿ ಯು ಕಳೆದ ಐದು ದಶಕಗಳಿಂದ ಅನೇಕ ವಲಸಿಗ ಕೇರಳೀಯರ ನೆಲೆಯಾಗಿದೆ. ಕಳೆದ ಸೆಪ್ಟೆಂಬರ್​ನಲ್ಲಿ ಕೇರಳ ದಲ್ಲೂ ಓಣಂ ಲಾಟರಿಯಲ್ಲಿ ವ್ಯಕ್ತಿಯೊಬ್ಬರಿಗೆ 25 ಕೋಟಿ ರೂಪಾಯಿ ಬಹುಮಾನ ಬಂದಿತ್ತು.

ಆಟೋ ರಿಕ್ಷಾ ಚಾಲಕ ಕಮ್​ ಬಾಣಸಿಗನಾಗಿ ಕೆಲಸ ಮಾಡುತ್ತಿದ್ದಅನೂಪ್ ಎಂಬುವವರಿಗೆ ಈ ಲಕ್​ ಖುಲಾ ಯಿಸಿತ್ತು. ಮಲೇಷ್ಯಾಕ್ಕೆ ಹೋಗಲು ಯೋಜಿಸುತ್ತಿದ್ದ ಈ ಅನೂಪ್​ ಇದಕ್ಕಾಗಿ 3 ಲಕ್ಷ ರೂಪಾಯಿಗಳ ಸಾಲಕ್ಕಾಗಿ ಅರ್ಜಿಯನ್ನೂ ಸಲ್ಲಿಸಿದ್ದರು. ಈ ಅರ್ಜಿ ಅಂಗೀಕಾರವಾದ ಮರು ದಿನವೇ 25 ಕೋಟಿ ರೂ.ಗಳ ಬಂಪರ್ ಬಹುಮಾನ ದೊರೆದಿತ್ತು. ಅನೂಪ್ ಗೆದ್ದಿರುವ ಅಷ್ಟೂ ಹಣಕ್ಕೆ ಶೇ.30 ಕ್ಕಿಂತಲೂ ಹೆಚ್ಚು ತೆರಿಗೆ ಕಟ್ಟಬೇಕು. ಅಂದರೆ ಗೆದ್ದ 25 ಕೋಟಿ ರೂಪಾಯಿಗಳಲ್ಲಿ 10 ಕೋಟಿಯಷ್ಟು ತೆರಿಗೆ ರೂಪದಲ್ಲಿ ಕಡಿತವಾಗಿ ಅನೂಪ್​ಗೆ 15 ಕೋಟಿ ರೂಪಾಯಿ ಸಿಗುತ್ತೆ ಎಂದು ವರದಿಯಾಗಿತ್ತು.