Sunday, 8th September 2024

ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ, ಶಶಿಗೆ ಸೋಲು

ನವದೆಹಲಿ: ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅ.17ರಂದು ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದೆ.

ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾ ಗಿದ್ದು, ಪ್ರತಿಸ್ಪರ್ಧಿ ಶಶಿ ತರೂರ್ ಸೋಲು ಕಂಡಿದ್ದಾರೆ.

ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾದಂತಾಗಿದೆ. ಈ ಸ್ಥಾನವನ್ನು ವಹಿಸಿ ಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ತರೂರ್ ಅವರಿಗೆ 1072 ಮತಗಳು ಲಭಿಸಿದ್ದರೆ, ಖರ್ಗೆ ಅವರು 7897 ಮತಗಳನ್ನು ಪಡೆದು ಕೊಂಡಿದ್ದಾರೆ.

ಎಐಸಿಸಿ ಅಧ್ಯಕ್ಷ ಹುದ್ದೆಗೆ ನಡೆದ ಮತದಾನದಲ್ಲಿ ಶೇ.96ರಷ್ಟು ಮತದಾನವಾಗಿತ್ತು. ಮತ ಚಲಾಯಿಸಲು ಅರ್ಹರಾದವರ ಪೈಕಿ 9500 ಕಾಂಗ್ರೆಸ್ ಮತದಾರರು ಚಲಾಯಿಸಿದ್ದರು. ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ತಿರುವನಂಥಪುರ ಸಂಸದ ಶಶಿ ತರೂರ್ ಅವರು ನಡುವೆ ಸ್ಪರ್ಧೆ ಏರ್ಪಟ್ಟಿತ್ತು.

ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಅವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕು ಎಂಬುದು ಗಾಂಧಿ ಕುಟುಂಬದ ಇಚ್ಛೆಯಾಗಿತ್ತು. ಆದರೆ, ರಾಜಸ್ಥಾನ ಶಾಸಕರು ಈ ನಿರ್ಧಾರದ ವಿರುದ್ಧ ಬಂಡೆದ್ದ ಕೂಡಲೇ ಅವರು ಸ್ಪರ್ಧೆಯಿಂದ ಹಿಂದೆ ಸರಿದರು. 

error: Content is protected !!