Friday, 13th December 2024

ನಿಂತಿದ್ದ ಟ್ರಕ್‌ಗೆ ಬಿಜೆಪಿ ಕಾರ್ಯಕರ್ತರಿದ್ದ ಬಸ್ ಡಿಕ್ಕಿ: 39 ಮಂದಿಗೆ ಗಾಯ

ಧ್ಯಪ್ರದೇಶ: ಬಿಜೆಪಿ ಕಾರ್ಯಕರ್ತರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 39 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಸಂಭವಿಸಿದೆ.

ಭೋಪಾಲ್‌ನಲ್ಲಿ ನಡೆಯುತ್ತಿರುವ ಬಿಜೆಪಿಯ ‘ಕಾರ್ಯಕರ್ತ ಮಹಾಕುಂಭ’ ಕಾರ್ಯಕ್ರಮ ದಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

ಬಿಜೆಪಿ ಕಾರ್ಯಕರ್ತರನ್ನು ಕರೆದೊಯ್ಯುತ್ತಿದ್ದ ಬಸ್ಸು ಕಾಸರವಾಡ ಬಳಿ ತಲುಪುತ್ತಿದ್ದಂತೆ ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ಗಾಯಾಳು ಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಕಾಂಗ್ರೆಸ್ ನಿಂದ ತೀವ್ರ ಪೈಪೋಟಿ ಎದುರಿಸುತ್ತಿರುವ ಮಧ್ಯಪ್ರದೇಶಕ್ಕೆ ಕಳೆದ 45 ದಿನಗಳಲ್ಲಿ ಪ್ರಧಾನಿ ಮೋದಿ ಅವರ ಮೂರನೇ ಭೇಟಿ ಇದಾಗಿದೆ. ‘ಮಹಾ ಕುಂಭ’ ಕಾರ್ಯಕ್ರಮಕ್ಕೆ 10 ಲಕ್ಷ ಜನರನ್ನು ಸಜ್ಜುಗೊಳಿಸುವ ಮಹತ್ವಾಕಾಂಕ್ಷೆಯ ಗುರಿಯನ್ನು ಬಿಜೆಪಿ ಹೊಂದಿದೆ.