Sunday, 15th December 2024

ಎಲ್‌ಪಿಜಿ ಸಿಲಿಂಡರ್ ಸ್ಫೋಟ: ಮಗು ಸಾವು

ಮಾಲ್ಡಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಮೂರು ವರ್ಷದ ಮಗು ಮೃತಪಟ್ಟಿದೆ.

ಕಾಲಿಯಾಚಕ್ ಪೊಲೀಸ್ ಠಾಣಾ ವ್ಯಾಪ್ತಿಯ ಜಾದುಪುರ್ ನಯಾಗ್ರಾಮ್ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಬಾಲಕ ತಬ್ರೇಜ್ ಶೇಖ್ ಮಗು ಅಡುಗೆ ಮನೆಯ ಬಳಿ ಆಟವಾಡುತ್ತಿದ್ದಾಗ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಾಯಗೊಂಡ ಬಾಲಕನನ್ನು ಕಾಲಿಯಾಚಕ್ ಗ್ರಾಮಾಂತರ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಮಾಲ್ಡಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿಯ ವೈದ್ಯರು ಮೃತಪಟ್ಟಿದ್ದಾರೆಂದು ಘೋಷಿಸಿದರು.