Friday, 13th December 2024

ಸಂಯುಕ್ತ ಕಿಸಾನ್ ಮೋರ್ಚಾದ ‘ಕಿಸಾನ್ ಮಹಾಪಂಚಾಯತ್’ ಸಮಾವೇಶ ಇಂದು

ವದೆಹಲಿ: ಕನಿಷ್ಠ ಬೆಂಬಲ ಬೆಲೆ ಕಡ್ಡಾಯಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿ ಮಾರ್ಚ್ 20 ರಂದು ಸಂಯುಕ್ತ ಕಿಸಾನ್ ಮೋರ್ಚಾ  ನವದೆಹಲಿಯ ರಂದು ರಾಮಲೀಲಾ ಮೈದಾನದಲ್ಲಿ ‘ಕಿಸಾನ್ ಮಹಾಪಂಚಾಯತ್’ ಸಮಾವೇಶ ಹಮ್ಮಿಕೊಂಡಿದೆ.

ಇದರಲ್ಲಿ ಭಾಗವಹಿಸಲು ದೇಶಾದ್ಯಂತ ಲಕ್ಷಾಂತರ ರೈತರು ದೆಹಲಿಯತ್ತ ಮುಖ ಮಾಡಿದ್ದಾರೆ.

ರೈತರ ಸಂಘಟನೆಗಳ ಒಕ್ಕೂಟವಾಗಿರುವ ‘ಕಿಸಾನ್ ಸಂಯುಕ್ತ ಮೋರ್ಚಾ’ ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿಗಾಗಿ ಒತ್ತಾಯಿಸಲು ‘ಕಿಸಾನ್ ಮಹಾಪಂಚಾಯತ್’ ನಡೆಸಲಾಗುವುದು ಎಂದು ರೈತ ಸಂಘವು ಈ ಹಿಂದಿನ ತಿಂಗಳೇ ತನ್ನ ನಿರ್ಧಾರ ಪ್ರಕಟಿಸಿತ್ತು.

ಭಾನುವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಸಾನ್ ಸಂಯುಕ್ತ ಮೋರ್ಚಾ (ಎಸ್‌ಕೆಎಂ) ನಾಯಕ ದರ್ಶನ್ ಪಾಲ್, ಕೇಂದ್ರ ಸರ್ಕಾರ ಎರಡು ವರ್ಷದ ಹಿಂದೆ 2021 ರಂದು ಡಿಸೆಂಬರ್ ತಿಂಗಳಲ್ಲಿ ಕೃಷಿ ಕಾಯ್ದೆ ಹಿಂಪಡೆಯಿತು. ಆ ವೇಳೆ ಲಿಖಿತವಾಗಿ ನಮಗೆ ನೀಡಿದ ಭರವಸೆಗಳನ್ನು ಈಡೇರಿಸಬೇಕು ಎಂದು ಅವರು ಆಗ್ರಹಿಸಿದರು.

ಅಷ್ಟೇ ಅಲ್ಲದೇ ಭಾರತ ದೇಶಾದ್ಯಂತ ರೈತರು ಎದುರಿಸುತ್ತಿರುವ ಕೃಷಿ ಬಿಕ್ಕಟ್ಟು, ವಿವಿಧ ಸಮಸ್ಯೆಗಳನ್ನು ತಗ್ಗಿಸಲು ಇಲ್ಲವೇ ಪರಿಹರಿಸಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.