Saturday, 23rd November 2024

ಕೆ.ಕವಿತಾ ಮಧ್ಯಂತರ ಜಾಮೀನು ಅರ್ಜಿ ವಜಾ

ನವದೆಹಲಿ: ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ.ಕವಿತಾ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.

ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕವಿತಾಗೆ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಮದ್ಯನೀತಿ ಪ್ರಕರಣದಲ್ಲಿ ಕಳೆದ ತಿಂಗಳು ಬಂಧಿಸಲಾಗಿತ್ತು.

ಏ.2 ರಂದು ನ್ಯಾಯಾಲಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಆಕೆ ಏ.15ರವರೆಗೆ ಜೈಲಿನಲ್ಲಿ ಇರಲಿ ದ್ದಾರೆ. ಮಗನ ಪರೀಕ್ಷೆಯನ್ನು ಉಲ್ಲೇಖಿಸಿ ಕವಿತಾ ಮಧ್ಯಂತರ ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ತಾಯಿಯ ಅನುಪಸ್ಥಿತಿಯನ್ನು ಸಹೋದರ ಅಥವಾ ತಂದೆ ಪೂರೈಸಲು ಸಾಧ್ಯವಿಲ್ಲ, ಅಂತಹ ಪರಿಸ್ಥಿತಿಯಲ್ಲಿ ಅವರಿಗೆ ಮಧ್ಯಂತರ ಜಾಮೀನು ನೀಡಬೇಕು ಎಂದು ವಕೀಲರು ಹೇಳಿದ್ದರು.

ವಿಚಾರಣೆ ವೇಳೆ ಇಡಿ ಪರವಾಗಿ ವಾದ ಮಂಡಿಸಿದ ವಕೀಲ ಜೊಹೆಬ್ ಹುಸೇನ್, ಕವಿತಾ ಪ್ರಕರಣದ ಪ್ರಮುಖ ಆರೋಪಿಯಾಗಿ ದ್ದಾರೆ. ತನ್ನ ಮೊಬೈಲ್‌ನಲ್ಲಿ ಸಿಕ್ಕಿದ್ದ ಸಾಕ್ಷ್ಯಗಳು ಸೇರಿದಂತೆ ತನ್ನ ವಿರುದ್ಧದ ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ.

ಈ ಪ್ರಕರಣದಲ್ಲಿ ತನಿಖಾ ಸಂಸ್ಥೆ ಯಶಸ್ಸಿನ ಅಂಚಿನಲ್ಲಿದ್ದು, ಕವಿತಾ ಅವರಿಗೆ ಮಧ್ಯಂತರ ಜಾಮೀನು ನೀಡುವುದರಿಂದ ತನಿಖೆಗೆ ಅಡ್ಡಿಯಾಗಲಿದೆ ಎಂದು ಇಡಿ ವಕೀಲರು ಪ್ರತಿಪಾದಿಸಿದ್ದಾರೆ.